ಹಾಸನ

ಶಾಲೆಯಿಂದ ಹೊರಗುಳಿದ ಮಕ್ಕಳ ಪತ್ತೆ ಹಚ್ಚುವ ಕಾರ್ಯ

Published On :

ಕ.ಪ್ರ. ವಾರ್ತೆ, ಅರಸೀಕೆರೆ,ಅ.27
ಶಿಕ್ಷಣ, ಶಿಶು ಅಭಿವೃದ್ಧಿ ಸಮಾಜ ಕಲ್ಯಾಣ, ಕಾರ್ಮಿಕ, ಕೈಗಾರಿಕಾ ಇಲಾಖೆಗಳು ಹಾಗೂ ತಾಲೂಕು ಆಡಳಿತದಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚುವ ಕಾರ್ಯ ಪಟ್ಟಣದಲ್ಲಿ ನಡೆಸಲಾಯಿತು.
ಪಟ್ಟಣದ ಶ್ರೀನಿವಾಸ ನಗರ, ರಾಷ್ಟ್ರೀಯ ಹೆದ್ದಾರಿ, ಸಾಯಿನಾಥ ರಸ್ತೆ, ಸಂತೆ ಮೈದಾನ ಸೇರಿದಂತೆ ನಾನಾ  ಕಡೆ ಭೇಟಿ ನೀಡಿದ ಅಧಿಕಾರಿಗಳ ತಂಡ ಗ್ಯಾರೇಜ್, ಹೋಟೆಲ್, ಬೇಕರಿ, ಬಾರ್ ಇನ್ನಿತರೆಡೆಗಳಲ್ಲಿ ಮಿಂಚಿನ ಕಾರ್ಯಾಚರಣೆ ಕೈಗೊಂಡಿತು. ಈ ವೇಳೆ ಸಂತೆ ಮೈದಾನದ ಆವರಣದಲ್ಲಿರುವ ತರಕಾರಿ ಮಳಿಗೆಗಳ ಪ್ರಾಂಗಣದಲ್ಲಿ ನಿರಾಶ್ರಿತನಾಗಿದ್ದ ಬಾಲಕನೊಬ್ಬನನ್ನು ಪತ್ತೆ ಹಚ್ಚಿ ಶಿಶು ಅಭಿವೃದ್ಧಿ ಇಲಾಖೆ ವಶಕ್ಕೆ ನೀಡಲಾಯಿತು. ಕಾರ್ಯಾಚರಣೆ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಮಾತನಾಡಿ, ಶಾಲೆ ನಡೆಯುತ್ತಿರುವ ದಿನಗಳಲ್ಲಿ ಕಾರ್ಯಾಚರಣೆ ನಡೆಸಿದರೆ ಹೆಚ್ಚಿನ ಪ್ರಯೋಜನವಾಗಲಿದೆ. ಶಾಲೆ ರಜೆ ಇರುವ ಕಾರಣ ಕೆಲ ಮಕ್ಕಳು ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದಾಗಿ ಮಾಹಿತಿ ನೀಡತೊಡಗಿದ್ದಾರೆ. ಇದರಿಂದ ಕೊಂಚ ಹಿನ್ನಡೆ ಅನುಭವಿಸುವಂತಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ನೆರವಿನಿಂದ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಸಾರ್ವಜನಿಕರು, ಅಂಗಡಿ ಮಾಲಿಕರು, ಈ ಬಗ್ಗೆ ಸಂಬಂಧಿಸಿದ ಇಲಾಖೆಗಳಿಗೆ ಸೂಕ್ತ ಮಾಹಿತಿ ಒದಗಿಸಿದರೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ದಾಖಲಿಸಲು ಸಾಧ್ಯವಾಗುವುದಾಗಿ ಹೇಳಿದರು. ಕಾರ್ಯಾಚರಣೆಯಲ್ಲಿ ಉಪ ತಹಶೀಲ್ದಾರ್ ಅಶೋಕ್, ನಾನಾ ಇಲಾಖೆಯ ಅಧಿಕಾರಿಗಳಾದ ಮಂಗಳಗೌರಿ, ಪ್ರಭಾಕರ್, ರಘು, ವಿಜಯಕುಮಾರ್ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.