ಕನ್ನಡ ಚಿತ್ರ ಹೆಚ್ಚು ವೀಕ್ಷಿಸಿ ಉತ್ತಮ ಚಿತ್ರಗಳ ನಿರ್ಮಾಣಕ್ಕೆ ಸಹಕರಿಸಿ: ಶಿವಣ್ಣ
ಚನ್ನರಾಯಪಟ್ಟಣ: ಪಟ್ಟಣದ ಪ್ರಸನ್ನ ಗಣಪತಿ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ ವಿಸರ್ಜನಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಟ ಶಿವರಾಜ್ಕುಮಾರ್ ಚಾಲನೆ ನೀಡಿದರು.
ಭಾನುವಾರ ಸಂಜೆ ಪಟ್ಟಣಕ್ಕೆ ಆಗಮಿಸಿದ ಶಿವರಾಜ್ಕುಮಾರ್ ಅವರನ್ನು ಅಭಿಮಾನಿಗಳು ಹಾಗೂ ಗಣಪತಿ ಸೇವಾ ಸಮಿತಿ ಕಾರ್ಯಕರ್ತರು ಗಡಿ ಭಾಗ ಕಿರೀಸಾವೆಯಿಂದ ಸ್ವಾಗತಿಸಿದರು. ಸಾವಿರಾರು ಅಭಿಮಾನಿಗಳು ಪಟ್ಟಣದ ಧನಲಕ್ಷ್ಮಿ ಚಿತ್ರಮಂದಿರದ ಬಳಿಯಿಂದ ಅಲಂಕೃತ ತೆರೆದ ಜೀಪಿನಲ್ಲಿ ್ಲ ಮೆರವಣಿಗೆ ನಡೆಸಿದರು.
ಪ್ರಮುಖ ಬೀದಿ ಬಿ.ಎಂ ರಸ್ತೆಯಲ್ಲಿ ಮೆರವಣಿಗೆಯಲ್ಲಿ ತಮ್ಮ ಅಭಿಮಾನಿಗಳಿಗೆ ನಮಸ್ಕರಿಸಿ ಶಿವರಾಜ್ಕುಮಾರ್, ಪಟ್ಟಣದ ನಲವತ್ತು ಅಡಿ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಕೆ.ಆರ್. ಸರ್ಕಲ್ನಲ್ಲಿ ಗಿಡ ನೆಟ್ಟು, ಪರಿಸರ ಉಳಿಸಲು ಪ್ರತಿಯೊಬ್ಬರು ಗಿಡ ನೆಟ್ಟು ಪೋಷಣೆ ಮಾಡುವತ್ತಾ ಮುಂದಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸೇವಾ ಸಮತಿ ವತಿಯಿಂದ ಪುರಸ್ಕರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಣ್ಣ ಕನ್ನಡ ಚಿತ್ರರಂಗ ತನ್ನದೇ ಆದ ಕಲ್ಪನೆಯನ್ನು ಉಳಿಸಿ ಬೆಳಸಿಕೊಂಡು ಬಂದಿದೆ. ಅಭಿಮಾನಿಗಳು ಕನ್ನಡ ಚಿತ್ರಗಳನ್ನು ಹೆಚ್ಚು ವೀಕ್ಷಿಸುವ ಮಾಡುವ ಮುಖೇನ ಉತ್ತಮ ಚಿತ್ರಗಳ ನಿರ್ಮಾಣಕ್ಕೆ ಸಹಕರಿಸಬೇಕು ಎಂದ ಅವರು, ಧಾರ್ಮಿಕ ಕಾರ್ಯಕ್ರಮಗಳು ಜನತೆಗೆ ನೆಮ್ಮದಿ ತರುತ್ತವೆ. ಅವುಗಳನ್ನು ಜನತೆ ಮುಂದುವರಿಸಿದರೆ ಅವರಲ್ಲಿ ಉತ್ತಮ ಆರೋಗ್ಯ ಮೂಡುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

