ಹಾಸನ

ಮಕ್ಕಳ ಸಮೀಕ್ಷೆ

Published On :

ಹಾಸನ: ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ನಿಖರವಾಗಿ ಗುರುತಿಸಿ ಶಾಲಾ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ಸಮೀಕ್ಷೆ ಕಾರ್ಯವನ್ನು  ಹಮ್ಮಿಕೊಳ್ಳಲಾಗಿದೆ. ಈ ಸಮೀಕ್ಷೆಯನ್ನು ಎರಡು ಹಂತಗಳಲ್ಲಿ ನಿರ್ವಹಿಸಲಾಗುವುದು. ಮೊದಲ ಹಂತದಲ್ಲಿ ನ.6 ರಿಂದ  ನ.7 ರವರೆಗೆ ಶಾಲಾ ಸಮೀಕ್ಷೆ ಮತ್ತು ಎರಡನೇ ಹಂತದಲ್ಲಿ ನ.13 ರಿಂದ ನ.17 ರವರೆಗೆ ಕುಟುಂಬ ಸಮೀಕ್ಷೆ ನಡೆಸಲಾಗುತ್ತಿದ್ದು, ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.  ಹೆಚ್ಚಿನ ಮಾಹಿತಿಗಾಗಿ ದೂ - ಉಪನಿರ್ದೇಶಕರು - 9448999342, ಡಿ.ವೈ.ಪಿ.ಸಿ - 9448999398, ಎ.ಪಿ.ಸಿ. - 9480695443, ಕಚೇರಿ - 08172-252855 ಸಂಪರ್ಕಿಸಲು ಉಪನಿರ್ದೇಶಕರು ಕೋರಿದ್ದಾರೆ.
ಅಧಿಕಾರ ದೀಕ್ಷೆ
ಸಕಲೇಶಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪಟ್ಟಣದ ರೋಟರಿ ಸಮುದಾಯ ಭವನದಲ್ಲಿ ಅ.30 ಬುಧವಾರ ಸಂಜೆ 4 ಗಂಟೆಗೆ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಎಸ್.ಎಂ.ಮಂಜುನಾಥ್ ತಿಳಿಸಿದ್ದಾರೆ. ತಾಲೂಕಿನ ಎಲ್ಲಾ ಕಸಾಪ ಸದಸ್ಯರು ಭಾಗವಹಿಸುವಂತೆ ಮಂಜುನಾಥ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.