ಇಬ್ಬೀಡು ಗ್ರಾಪಂನಲ್ಲಿ ರಾಷ್ಟ್ರಧ್ವಜಕ್ಕೆ ಅಪಚಾರ: ಸಾರ್ವಜನಿಕರ ಆಕ್ರೋಶ
ಕ.ಪ್ರ.ವಾರ್ತೆ ಬೇಲೂರು ಅ.29
ತಾಲೂಕಿನ ಇಬ್ಬೀಡು ಗ್ರಾಮ ಪಂಚಾಯ್ತಿಯಲ್ಲಿ ಬೇಕಾಬಿಟ್ಟಿ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಧ್ವಜಕ್ಕೆ ಅಪಚಾರ ಎಸಗಿದ್ದಾರೆ ಎಂದು ಗ್ರಾಮಸ್ಥರು ಅಧಿಕಾರಗಳ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ತಾಲೂಕು ಕೇಂದ್ರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ ಗ್ರಾಮ ಪಂಚಾಯ್ತಿ ಕಾರ್ಯಾಲಯ ಕಳೆದ ಆರು ತಿಂಗಳ ಹಿಂದೆ ಹಳೆಯ ಕಟ್ಟಡದ ಬದಲು 2011-12 ನೇ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ರಾಜೀವ್ಗಾಂಧಿ ಸೇವಾ ಕೇಂದ್ರಕ್ಕೆ ಬದಲಾವಣೆಗೊಂಡಿತು. ಆದರೆ ರಾಷ್ಟ್ರಧ್ವಜ ಹಾರಿಸಲು ಕನಿಷ್ಟ ಮಟ್ಟದ ಧ್ವಜಸ್ತಂಭವಿಲ್ಲದೆ ತುಕ್ಕು ಹಿಡಿದ ಕಬ್ಬಿಣದ ಪೈಪ್ಗೆ ರಾಷ್ಟ್ರಧ್ವಜವನ್ನು ಕಟ್ಟಿ ನಿತ್ಯವೂ ಅಪಚಾರ ಮಾಡುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ರಾಷ್ಟ್ರಧ್ವಜವನ್ನು ನಿತ್ಯವೂ ಹಾರಿಸ ಬೇಕು ಹಾಗೂ ಸಂಜೆ ವಂದನೆ ಸಲ್ಲಸುವ ಮೂಲಕ ಬಾವುಟವನ್ನು ಇಳಿಸಬೇಕು ಎಂದು ಸರ್ಕಾರ ಸೂಚಿಸಿದೆ. ಹಾಗೂ ನಿತ್ಯ ಗ್ರಾಮ ಪಂಚಾಯಿತಿಯಲ್ಲಿ ಕಟ್ಟಡದ ಮಧ್ಯೆ ಭಾಗದಲ್ಲಿ 8 ಅಡಿ ಉಳ್ಳ ನೂತನ ಕಬ್ಬಿಣದ ಪೈಪ್ಗೆ ಧ್ವಜ ಕಟ್ಟಬೇಕು, ಬೆಳಗ್ಗೆ 6 ಕ್ಕೆ ರಾಷ್ಟ್ರಧ್ವಜವನ್ನು ಕಟ್ಟಿ ಸಂಜೆ 6 ಕ್ಕೆ ಸರಿಯಾಗಿ ರಾಷ್ಟ್ರಧ್ವಜವನ್ನು ರಾಷ್ಟ್ರಗೀತೆ ಹಾಡುವ ಮೂಲಕ ಇಳಿಸಬೇಕು ಎಂಬ ನಿಯಮಗಳನ್ನು ಗ್ರಾಮ ಪಂಚಾಯ್ತಿ ಅಧಿಕಾರಿಗಳು ಗಾಳಿಗೆ ತೂರಿದ್ದಾರೆ ಎಂದು ಅಪಾದಿಸಿದರು.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲವಾದರೆ ತಾಲೂಕು ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

