ತಂಗುದಾಣ ನಿರ್ಮಾಣಕ್ಕೆ ಭೂಮಿ ಪೂಜೆ
ಚನ್ನರಾಯಪಟ್ಟಣ: ಪಟ್ಟಣದಲ್ಲಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ನಾಲ್ಕು ಕಡೆಗಳಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಿಸುವ ಕಾರ್ಯಕ್ಕೆ ಶಾಸಕ ಸಿ.ಎನ್.ಬಾಲಕೃಷ್ಣ ಚಾಲನೆ ನೀಡಿದರು.
ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ 3.5 ಲಕ್ಷ ರು. ವೆಚ್ಚದಲ್ಲಿ ಹೈಟೆಕ್ ಪ್ರಯಾಣಿಕರ ತಂಗುದಾಣ ನಿರ್ಮಿಸುವ ಸಲುವಾಗಿ ಪುರಸಭಾ ಕಚೇರಿ ಎದುರು ಶಾಸಕರು ಭೂಮಿ ಪೂಜೆ ನೆರವೇರಿಸಿದರು.
ಹಳೆ ಬಸ್ ನಿಲ್ದಾಣದ ಪುರಸಭೆ ಮುಂಭಾಗ, ಪಶು ವೈದ್ಯ ಆಸ್ಪತ್ರೆ, ಮೈಸೂರು ರಸ್ತೆಯ ಸವಿತಾ ಶಿವನಂಜೇಗೌಡ ಕಲ್ಯಾಣ ಮಂಟಪದ ಬಳಿ ಹಾಗೂ ನವೋದಯ ಸರ್ಕಲ್ನಲ್ಲಿ ಬಸ್ ತಂಗುದಾಣ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಪ್ರಯಾಣಿಕರ ತಂಗುದಾಣದ ಜತೆಗೆ ಸಾರ್ವಜನಿಕ ಶೌಚಾಲಯದ ಕೊರತೆಯಿದ್ದು, ಈ ನಿಟ್ಟಿನಲ್ಲಿ ಪಟ್ಟಣದಲ್ಲಿ ಅಗತ್ಯವಾಗಿರುವ 5 ಕಡೆಗಳಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಸಾಗಿದೆ ಎಂದರು.
ಹಳೆ ಬಸ್ ನಿಲ್ದಾಣದ ಎರಡು ಕಡೆಗಳಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಿಸಲು ಸಾರ್ವಜನಿಕರು ಹಿಂದಿನಿಂದಲೂ ಒತ್ತಾಯಿಸುತ್ತಿದ್ದರು. ಈ ಉದ್ದೇಶದಿಂದ ಬಿ.ಎಂ ರಸ್ತೆಗೆ ಹೊಂದಿಕೊಂಡಿದ್ದ ಪುರಸಭೆಯ ಹಳೆಯ ಕಟ್ಟಡವನ್ನು ನೆಲಸಮ ಮಾಡಿ ತಂಗುದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

