ಇಂದು ರಾಜ್ಯೋತ್ಸವ
ಹೊಳೆನರಸೀಪುರ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನ.1ರಂದು ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಶಾಸಕ ರೇವಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಆರ್.ಬಿ. ಶಂಕರಪ್ಪ ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಲಿರುವ ಸಮಾರಂಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಅರಕಲಗೂಡು ಶಾಸಕ ಎ. ಮಂಜು ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಕನ್ನಡ ರಾಜ್ಯೋತ್ಸವದ ಬಗ್ಗೆ ದೊಡ್ಡಕಾಡನೂರು ಜೆಎಸ್ಎಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚೌಡಯ್ಯ ಕಟ್ನವಾಡಿ ಪ್ರಮುಖ ಉಪನ್ಯಾಸ ನೀಡಲಿದ್ದಾರೆ.
ಇಂದು ಹಾಸನಕ್ಕೆ ಸಿದ್ದಾಗಂಗಾಶ್ರೀ
ಹಾಸನ: ನಗರದ ಅಧಿದೇವತೆ ಹಾಸನಾಂಬೆ ದರ್ಶನ ಮಾಡಲು ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ನ.1ರಂದು ಬೆಳಗ್ಗೆ 10.30ಕ್ಕೆ ಆಗಮಿಸುವರು ಎಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ತಿಳಿಸಿದ್ದಾರೆ.
ತರಬೇತಿ
ಹಾಸನ: ಆದಿಚುಂಚನಗಿರಿ ಶಾಖಾ ಮಠದ ಬಿಜಿಎಸ್ ಸ್ಟಡಿ ಸೆಂಟರ್ ವತಿಯಿಂದ ಕೆಎಎಸ್ ಪರೀಕ್ಷೆಗೆ ನ.1ರಿಂದ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಆಯೋಜಿಸಲಾಗಿದೆ. ವಿವರಕ್ಕೆ ಮೊ. 80508 39482 ಸಂಪರ್ಕಿಸಬಹುದು.
ಅರ್ಜಿ ಆಹ್ವಾನ
ಹಾಸನ: ಬೆಂಗಳೂರಿನ ಕರ್ನಾಟಕ ಅಕಾಡೆಮಿ ವತಿಯಿಂದ ಜವಾಹರಲಾಲ್ ನೆಹರು ಜಯಂತಿ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜವಾಹರಲಾಲ್ ನೆಹರು ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವರಕ್ಕೆ ಮೊ. 99640 00890 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

