ಹಾಸನ

ಜಿಲ್ಲಾ ಸಹಕಾರಿ ಬ್ಯಾಂಕ್ ರಾಜ್ಯದಲ್ಲೇ 3ನೇ ಸ್ಥಾನ

Published On :

ನುಗ್ಗೇಹಳ್ಳಿ: ಜಿಲ್ಲಾ ಸಹಕಾರಿ ಬ್ಯಾಂಕ್ 680 ಕೋಟಿ  ರು. ವ್ಯವಹಾರ ನಡೆಸಿ ರಾಜ್ಯದಲ್ಲಿಯೇ 3ನೇ ಸ್ಥಾನದಲ್ಲಿ ಇದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದ್ದಾರೆ.
ನುಗ್ಗೇಹಳ್ಳಿ ಸಮೀಪದ ಜಿನ್ನೇನಹಳ್ಳಿಯಲ್ಲಿ ಇತ್ತೀಚೆಗೆ  ನಡೆದ ನವಿಲೆ ಕೃಷಿ ಪತ್ತಿನ ಸಹಕಾರ ಸಂಘದ ಚೆಕ್ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಶಾಸಕ ಸಿ.ಎನ್. ಬಾಲಕೃಷ್ಣ ಉದ್ಘಾಟಿಸಿ ಮಾತನಾಡಿದರು.
ನವಿಲೆ ಕೃಷಿ ಪತ್ತಿನ ಸಹಕಾರ ಸಂಘದಿಂದ 2.50 ಕೋಟಿ ರು.  ರೈತರಿಗೆ ಸಾಲ ನೀಡಿದೆ. ವರ್ಷದೊಳಗೆ ಮರುಪಾವತಿ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ. ಈ ಭಾಗದಲ್ಲಿ ಅಂತರ್ಜಲ ಸಮಸ್ಯೆ ಹೆಚ್ಚಾಗಿದ್ದು ಕುಡಿಯುವ ನೀರಿನ ಅನುಕೂಲತೆಗಾಗಿ ಮುಂದಿನ ದಿನಗಳಲ್ಲಿ ಕಾರೇಹಳ್ಳಿ, ದಿಡಗ ಹಾಗೂ ಹಿರೀಸಾವೆ ಕರೆಗಳಿಗೆ ಹಂತ ಹಂತವಾಗಿ ನೀರು ಹರಿಸುವುದಾಗಿ ತಿಳಿಸಿದರು.  
ಜಿನ್ನೇನಹಳ್ಳಿಗೆ 5 ಲಕ್ಷ ರು. ಸಮುದಾಯ ಭವನ ಮಾಡಿಸುವ ಭರವಸೆ ನೀಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಪರಮ ದೇವರಾಜೇಗೌಡ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಪಿ.ನಾಗರಾಜು, ಗ್ರಾಪಂ ಅಧ್ಯಕ್ಷ ಎನ್.ಜೆ. ನಾಗರಾಜು, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಎನ್.ಬಿ.ಮಂಜುನಾಥ್, ಗ್ರಾಪಂ ಮಾಜಿ ಅಧ್ಯಕ್ಷ ಎನ್.ಬಿ. ನಾಗರಾಜು, ಸಿದ್ದಣ್ಣ, ರೇವಣ್ಣ, ಕುಮಾರ್, ಸತೀಶ್, ಹಾಗೂ ಭಾರತೇಶ್ ಇದ್ಧರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.