ತಾಪಂ ಸಭೆಯಲ್ಲಿ ಸದಸ್ಯರ ಆಕ್ರೋಶ
ಬೇಲೂರು: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲಕ್ಷ್ಮೇಗೌಡ ಚುನಾಯಿತ ಪ್ರತಿನಿಧಿಗಳಿಗೆ ಬೆಲೆ ಕೊಡದೆ ಉಡಾಫೆ ಉತ್ತರ ನೀಡುತ್ತಾರೆ, ಇಲಾಖೆಯ ಯಾವುದೇ ಯೋಜನೆಗಳನ್ನು ತಾಲೂಕು ಪಂಚಾಯ್ತಿ ಸದಸ್ಯರಿಗೆ ತಿಳಿಸದೆ ಕೇವಲವಾಗಿ ಮಾತನಾಡುತ್ತಿದ್ದಾರೆ ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಸೂಚಿಸುವಂತೆ ಸದಸ್ಯರಾದ ರವಿಕುಮಾರ್, ಪರ್ವತಯ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ತಾಕೀತು ಮಾಡಿದರು.
ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಲಕ್ಷ್ಮೇಗೌಡ ಅವರು ಇಲಾಖೆಯ ಯಾವುದೇ ವಿಷಯವನ್ನು ಸದಸ್ಯರಿಗೆ ತಿಳಿಸುತ್ತಿಲ್ಲ ಎಂದಾಗ ಕಾರ್ಯನಿರ್ವಹಣಾಧಿಕಾರಿ ಶಿವಣ್ಣ ಮಾತನಾಡಿ, ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು ಸದಸ್ಯರ ಜೋತೆ ಚರ್ಚೆ ಮಾಡುವುದು ಸರಿಯಲ್ಲ ಲಕ್ಷ್ಮೇಗೌಡರೇ ನೀವು ಹೇಳಿದ ಹಾಗೆ ಕೇಳಲು ಸಾಧ್ಯವಿಲ್ಲ. ಸಭೆ ಹೇಳಿದ ಹಾಗೆ ಕೇಳಬೇಕು ಕೇಳಿದ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟಗಾರರ ಜತೆ ಶಾಮೀಲಾಗಿ ಮಾಮೂಲಿ ವಸೂಲಿ ಮಾಡುತ್ತಾ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕು ಪಂಚಾಯ್ತಿ ಸದಸ್ಯರಾದ ಪರ್ವತಯ್ಯ, ರವಿಕುಮಾರ್ ಅರೋಪಿದ್ದಾರೆ. ಉಪಾಧ್ಯಕ್ಷೆ ಕಮಲಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

