ಹಾಸನ

ವೇಗದೂತ ಬಸ್ ನಿಲುಗಡೆಗೆ ಆಗ್ರಹಿಸಿ ಗ್ರಾಮಸ್ಥರಿಂದ ರಸ್ತೆ ತಡೆ

Published On :

ಅರಸೀಕೆರೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತಾಲೂಕಿನ ಮುದುಡಿ ಗ್ರಾಮದಲ್ಲಿ ಎಲ್ಲಾ ವೇಗದೂತ ಬಸ್ಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಗ್ರಾಮಸ್ಥರು ಗುರುವಾರ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ತಾಲೂಕಿನ ಮುದುಡಿ ಗ್ರಾಮ ಪಂಚಾಯ್ತಿ ಕಚೇರಿಯ ಮುಂದೆ ಸೇರಿದ ಕರವೇ ಕಾರ್ಯಕರ್ತರೊಂದಿಗೆ ನೂರಾರು ಗ್ರಾಮಸ್ಥರು ಸೇರಿ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ ಅರ್ಧ ಘಂಟೆಗೂ ಹೆಚ್ಚಿನ ಕಾಲ ರಸ್ತೆ ತಡೆಯನ್ನು ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕರವೇ ಅಧ್ಯಕ್ಷ ಹೇಮಂತ್ಕುಮಾರ್ ಮಾತನಾಡಿ, ಮುದುಡಿ ಗ್ರಾಮದ ಸುತ್ತಮುತ್ತ 30ಕ್ಕೂ ಹೆಚ್ಚಿನ ಗ್ರಾಮಗಳಿದ್ದು ಈ ಗ್ರಾಮಸ್ಥರು ಪಟ್ಟಣಕ್ಕೆ ಹೋಗಲು ಮುದುಡಿ ಬಸ್ ನಿಲ್ದಾಣಕ್ಕೆ ಬರುವುದು ಅನಿವಾರ್ಯ. ಆದರೆ ಗ್ರಾಮದ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಚಲಿಸುವ ಸಾರಿಗೆ ಸಂಸ್ಥೆಗಳ ವೇಗದೂತ ಬಸ್ಗಳು ಇಲ್ಲಿ ನಿಲ್ಲದೇ ಹೋಗುತ್ತಿರುವ ಕಾರಣ ಗ್ರಾಮೀಣ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಾರಿಗೆ ಸಂಸ್ಥೆಗೆ ಗ್ರಾಮಸ್ಥರು ಅನೇಕ ಬಾರಿ ಮನವಿ ಮಾಡಿದರು. ಗ್ರಾಮಸ್ಥ ಗಂಗಾಧರ್ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಂಸ್ಥೆಯ ಅರಸೀಕೆರೆ ಘಟಕದ ವ್ಯವಸ್ಥಾಪಕ ಹೇಮಂತ್ಕುಮಾರ್ ಪ್ರತಿಭಟನಾಕಾರರ ಮನವಿ ಆಲಿಸಿ ಈ ಭಾಗದ ಗ್ರಾಮಸ್ಥರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು. ಪ್ರತಿಭಟನೆಯಲ್ಲಿ ಕರವೇ ನಗರಾಧ್ಯಕ್ಷ ಕಿರಣ್ಕುಮಾರ್, ಗ್ರಾಮದ ಶಿವಕುಮಾರ್, ಪ್ರದೀಪ್, ತುಳಸಿದಾಸ್ ಧರ್ಮೇಶ್, ಲೋಕೇಶ್ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.