ಹಾಸನ

ಕೃಷ್ಣ ಜನ್ಮಾಷ್ಟಮಿ

Published On :

ಹಾಸನ: ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತಮ ವಾತಾವರಣ ಕಲ್ಪಿಸಲಾಗಿದೆ. ಶಿಕ್ಷಣ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಶಿಕ್ಷಣ ನೀಡಲು ಶಕ್ತಿ ತುಂಬಲಿ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎನ್. ಚಂದ್ರಶೇಖರ್ ತಿಳಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಟೈಮ್ಸ್ ಇಂಟರ್ ನ್ಯಾಷನಲ್ ಶಿಕ್ಷಣ ಸಂಸ್ಥೆ ಏರ್ಪಡಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರ ಕಷ್ಟದ ಪರಿಸ್ಥಿತಿಯಲ್ಲಿದ್ದಾಗ ನವಿಲೆ ಅಣ್ಣಪ್ಪ ಅಧ್ಯಕ್ಷರಾಗಿ ಬಂದು ಸಾಕಷ್ಟು ಸುಧಾರಣೆ ತಂದರು. ಇದೇ ವೇಳೆ ಶಿಕ್ಷಣ ಸಂಸ್ಥೆಗೆ ನಿವೇಶನ ನೀಡಿದ್ದು, ಇಂದು ಉತ್ತಮ ಶಿಕ್ಷಣ ಸಂಸ್ಥೆ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ ಮಾತನಾಡಿದರು. ಹುಡಾ ಕಮೀಷನರ್ ರಮೇಶ್, ಟಿಎಂಪಿಎನ್ಸಿ ಶಿವಕುಮಾರ್, ಎಂ.ಸಿ. ಸತ್ಯನಾರಾಯಣ್, ಸಂಸ್ಥೆ ಕಾರ್ಯದರ್ಶಿ ಬಿ.ಕೆ. ಗಂಗಾಧರ್, ಪ್ರಿನ್ಸಿಪಾಲ್ ಉಮಾ ಎಸ್.ಪಾಟೀಲ್, ಎ.ಬಿ.ಸುರೇಂದ್ರ ಕುಮಾರ್ ಇತರರು ಇದ್ದರು.
ಅರ್ಜಿ ಆಹ್ವಾನ
ಅರಕಲಗೂಡು: 2013-14 ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗೆ 10ನೇ ತರಗತಿ ವಿದ್ಯಾರ್ಥ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ನ್ಯಾಷನಲ್ ಮೆರಿಟ್ ಸ್ಕಿಲ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು 8ನೇ ತರಗತಿ ವಿದ್ಯಾರ್ಥಿಗಳು ಅರ್ಹರಾಗಿದ್ದು, ಈ ಎರಡೂ ಪರೀಕ್ಷೆಗಳಿಗೆ ಸೆ. 10 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ನವೋದಯ ಪರೀಕ್ಷೆ-5ನೇ ತರಗತಿ ವಿದ್ಯಾರ್ಥಿಗಳು ನವೋದಯ ಪರೀಕ್ಷೆ ಬರೆಯಲು ಅರ್ಹರಾಗಿದ್ದು, ಅಕ್ಟೋಬರ್ 30ರೊಳಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.