ಹಾಸನ

ಎನ್ಎಸ್ಎಸ್ ಚಟುವಟಿಕೆ ಉದ್ಘಾಟನೆ

Published On :

ಜಾವಗಲ್: ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಪ್ರಾಮುಖ್ಯತೆ ವಹಿಸುತ್ತವೆ ಎಂದು ತಾಪಂ ಸದಸ್ಯೆ ಲಕ್ಷ್ಮೀ ರವಿಶಂಕರ್ ತಿಳಿಸಿದರು.
 ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ, ಕಲೆ, ಕ್ರೀಡೆ ಹಾಗೂ ಎನ್ಎಸ್ಎಸ್ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ, ಕ್ರೀಡಾಬೆಳವಣಿಗೆ, ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಬೆಳಕು ಚೆಲ್ಲಲು ಸಂಘ ಅವಶ್ಯಕ ಎಂದರು.
 ಉಪ ಪ್ರಾಂಶುಪಾಲ ಯೋಗೀಶ್ ಮಾತನಾಡಿದರು.  ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್ಎಸ್. ವಸಂತರಾಜೇ ಅರಸ್ ಮಾತನಾಡಿ,  ಪಿಯುಸಿ ಮತ್ತು ಪ್ರೌಢಶಾಲಾ ವಿಭಾಗದಿಂದ ಸುಮಾರು 1000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಹೆಚ್ಚುವರಿ ಕೊಠಡಿಗಳು, ಪೀಠೋಪಕರಣಗಳು ಮತ್ತು ಶೌಚಾಲಯ ಸೌಲಭ್ಯಗಳನ್ನು ಕೂಡಲೆ ಒದಗಿಸಿಕೊಡುವಂತೆ ಮನವಿ ಮಾಡಿದರು. ಹಾಸನ ಜಿಲ್ಲೆಯ ಗ್ರಾಮಾಂತರ ಪಿಯು ಕಾಲೇಜುಗಳಲ್ಲಿ ಜಾವಗಲ್ ಕಾಲೇಜು ಉತ್ತಮ ಸ್ಥಾನ ಗಳಿಸಿದೆ ಎಂದರು.
 ಗ್ರಾಪಂ ಅಧ್ಯಕ್ಷೆ ಕವಿತಮಂಜುನಾಥ್, ನಿವೃತ್ತ ದೈಹಿಕ ಶಿಕ್ಷಕ ಎಂ.ವೈ.ಸುರ್ಕೊಡ್,  ಉಪನ್ಯಾಸಕ ಎನ್.ಉದಯಕುಮಾರ್, ಸುಕನ್ಯ, ನಾಗರಾಜ್, ಚಂದ್ರೇಗೌಡ ಮೊದಲಾದವರು ಮಾತನಾಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.