ಗೋ ಶಾಲೆ ತೆರೆಯಲು ಆಗ್ರಹಿಸಿ ಪ್ರತಿಭಟನೆ
ಹಾರನಹಳ್ಳಿ (ಅರಸೀಕೆರೆ ತಾ.): ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯುವಂತೆ ಆಗ್ರಹಿಸಿ ಸೋಮವಾರ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಹಾರನಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು.
ಅರಸೀಕೆರೆ ತಾಲೂಕಿನಲ್ಲಿ ಬರಗಾಲ ಬಂದು ಜಾನುವಾರುಗಳಿಗೆ ಮೇವು ಹಾಗೂ ನೀರಿಗೆ ತೊಂದರೆಯಾಗಿದ್ದು ಇದರ ಬಗ್ಗೆ ಅನೇಕ ಬಾರಿ ಪ್ರತಿಭಟನೆ, ರಸ್ತೆ ತಡೆ ಮಾಡಿದರೂ ಹಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯುವ ಬಗ್ಗೆ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದು ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಕಿಡಿ ಕಾರಿದರು.
ಈಗಾಗಲೇ ಜಿಲ್ಲಾಧಿಕಾರಿಗಳಿಂದ ಬರ ಕಾಮಗಾರಿ ಹಾಗೂ ಗೋಶಾಲೆ ತೆರೆಯುವ ಬಗ್ಗೆ ಸರ್ಕಾರ ಹಣ ಮಂಜೂರು ಮಾಡಿದ್ದರೂ ಇಲ್ಲಿಯವರೆಗೂ ಹಾರನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗೋಶಾಲೆ ತೆರೆದಿಲ್ಲ. ಕಳೆದ ಪ್ರತಿಭಟನೆ ಸಂದರ್ಭದಲ್ಲಿ ಶಾಸಕರು, ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್ ವಾರದಲ್ಲಿ ಗೋಶಾಲೆ ತೆರೆಯುವ ಬಗ್ಗೆ ಭರವಸೆ ನೀಡಿ ಹೋದರೆ ಹೊರತು ಕಾರ್ಯರೂಪಕ್ಕೆ ಬಂದಿಲ್ಲವೆಂದು ಹಾರನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಆಡಳಿತ ಪರವಾಗಿ ಗ್ರಾಮ ಲೆಕ್ಕಿಗ ಯದುಕುಮಾರ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ತಹಸೀಲ್ದಾರ ಅವರಿಗೆ ತಲುಪಿಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಕರೀಂ ಸಾಬ್, ಲಕ್ಕಮ್ಮ ಇನ್ನಿತರ ಗ್ರಾಮಸ್ಥರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

