ಹಾಸನ

ಜೆಡಿಎಸ್ ಏಜೆಂಟರಂತೆ ವರ್ತಿಸುವ ಶಾಸಕ ಮಂಜು: ಕಾಂಗ್ರೆಸ್ ಮುಖಂಡರ ಆರೋಪ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಸೆ. 2
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅನುಪಮ ಮಹೇಶ್ ಅವರ ಸೋಲಿಗೆ ಶಾಸಕ ಎ.ಮಂಜು ಕಾರಣವಾಗಿದ್ದು, ಇತ್ತೀಚೆಗೆ ಅವರು ಜೆಡಿಎಸ್ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಹೊನ್ನಿಕೊಪ್ಪಲು ಮಂಜೇಗೌಡ ಅವರು, ರಾಜಕೀಯ ರಂಗದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಜಿಲ್ಲಾ ಕಾಂಗ್ರೆಸ್ನ ಒಗ್ಗಟ್ಟು ಒಡೆಯುವುದರಲ್ಲಿ ಯಶಸ್ವಿಯಾಗುತ್ತಿರುವುದು ನಿಷ್ಠಾವಂತ ಕಾಂಗ್ರೆಸಿಗರಲ್ಲಿ ಅಚ್ಚರಿ ಮೂಡಿಸಿದೆ. ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಚ್.ಡಿ.ದೇವೇಗೌಡರಿಗೆ ಮತ ಹಾಕುವಂತೆ ಜನ ಸಾಮಾನ್ಯರಲ್ಲಿ ಗೊಂದಲ ಮೂಡಿಸಿದ್ದರು ಎಂತಲೂ ದೂರಿದರು.
ಆಲ್ಲದೆ ಆ ಚುನಾವಣೆಯಲ್ಲಿ ಜೆಡಿಎಸ್ಗೆ ಅರಕಲಗೂಡು ಕ್ಷೇತ್ರದಿಂದ 62 ಸಾವಿರ ಮತಗಳನ್ನು ಕೊಡಿಸುವಲ್ಲಿ ಯಶಸ್ವಿ ಯಾದರು. ಹಾಗೆ ಯೇ ಹೊಳೆನರಸೀಪುರ ವಿಧಾನಸಭಾ ಚುನಾವಣೆ ನಡೆದ ಸಂದರ್ಭದಲ್ಲಿ ಜೆಡಿಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ತಾಲೂಕು ಕಾಂಗ್ರೆಸ್ನ ಯಾವುದೇ ಮುಖಂಡರನ್ನು ಭೇಟಿ ಮಾಡದಂತೆ ಹಾಗೂ ಸಭೆ ಸಮಾರಂಭಗಳಿಗೆ ಕರೆಯದಂತೆ ಅನುಪಮ ಮಹೇಶ್ ಅವರಿಗೆ ತಪ್ಪು ಮಾರ್ಗದರ್ಶನ ನೀಡಿದ್ದು, ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಸೋಲುಂಟು ಆಗಲು ಕಾರಣವಾಗಿದೆ ಎಂದು ಹೇಳಿದರು.
ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಯ ಬೆಟ್ಟದಗುಳದಪುರದಲ್ಲಿ ನಡೆದ ಶ್ರೀವೆಂಕಟರಮಣ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಶಂಕುಸ್ಥಾಪನೆ ಹಾಗೂ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಉದ್ಘಾಟನಾ ಸಮಾರಂಭಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾರ್ಯಕರ್ತರ ಗಮನಕ್ಕೆ ಬಾರದೆ ಅರಕಲಗೂಡು ಶಾಸಕ ಎ.ಮಂಜು ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣರನ್ನು ಸಮಾರಂಭಕ್ಕೆ ಆಹ್ವಾನಿಸಿ ಅವರ ಕ್ಷೇತ್ರದ ಜೆಡಿಎಸ್ನವರ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಪಕ್ಷದ ಯಾವುದೆ ಸಭೆ ಸಮಾರಂಭಗಳಿಗೆ ಬಾರದೆ ಕಾಂಗ್ರೆಸ್ನಲ್ಲಿ ಗುಂಪುಗಾರಿಕೆಯನ್ನು ಹುಟ್ಟಿಸಿ ಕಾರ್ಯಕರ್ತರಲ್ಲಿ ಇವರು ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದಾರೋ ಅಥವಾ ಜೆಡಿಎಸ್ನಿಂದ ಆಯ್ಕೆಯಾಗಿದ್ದಾರೋ ಎಂಬ ಗೊಂದಲ ಉಂಟು ಮಾಡುತ್ತಿರುತ್ತಾರೆ. ಜೆಡಿಎಸ್ಗೆ ಜಿಲ್ಲೆಯಲ್ಲಿ ಹೀಗೆ ಬೆಂಬಲ ನೀಡುವುದು ಮುಂದುವರೆದರೆ ಜಿಲ್ಲಾ ಡಿಸಿಸಿ ಮತ್ತು ರಾಜ್ಯ ಪ್ರದೇಶ ಕಾಂಗ್ರೆಸ್ ಹಾಗೂ ರಾಷ್ಟ್ರೀಯ ಮುಖಂಡರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದು ಇವರ ಬಗ್ಗೆ ಶಿಸ್ತು ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದರು. ಮುಖಂಡ ಸ್ವಾಮಿಗೌಡ, ಎಚ್.ಮಂಜೇಗೌಡ, ಬಿ.ಎಚ್.ನಂಜುಂಡೇಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.