ಹಾಸನ

'ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಹಗರಣ ಬಯಲಿಗೆ ಎಳೆಯಿರಿ'

Published On :

ಹೊಳೆನರಸೀಪುರ: ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸಿರುವ ಹಗರಣಗಳನ್ನು ಜನ ಸಮಾನ್ಯರಿಗೆ ತಲುಪಿಸುವಲ್ಲಿ ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಶ್ರಮಿಸಲಿ ಎಂದು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎಂ.ರಾಜು ತಿಳಿಸಿದರು. ಪಟ್ಟಣದ ಕಾಳಿಕಾಂಬ ದೇವಾಸ್ಥಾನದಲ್ಲಿ ಸೋಮವಾರ ಬಿಜೆಪಿ  ಕಾರ್ಯಕರ್ತರ ಸಭೆಯಲ್ಲಿ  ಭಾಗವಹಿಸಿ ಅವರು ಮಾತನಾಡಿದರು.  ಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಸುವ ಮೂಲಕ ಹಾಸನ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ತನ್ನದಾಗಿಸಿಕೊಳ್ಳಲಿದೆ ಎಂದು ಇದೆ ವೇಳೆ ಅವರು ಆಶಾ ಭಾವನೆ ವ್ಯಕ್ತ ಪಡಿಸಿದರು.
ದೇಶದೆಲ್ಲೆಡೆ ಮೋದಿ ಅಲೆ: ಬಿಜೆಪಿ ಜಿಲ್ಲಾ ಅಧ್ಯಕ್ಷ ರೇಣುಕುಮಾರ್ ಮಾತನಾಡಿ, ದೇಶದೆಲ್ಲೆಡೆ ಇದೀಗ ಮೋದಿ ಅಲೆ ಎದ್ದಿದೆ ಈ ಭಾರಿ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಅಭಿಪ್ರಾಯವ್ಯಕ್ತಪಡಿಸಿದ ಅವರು ಮೋದಿ ಅವರನ್ನು ಪ್ರಧಾನಿ ಮಾಡಲು ದೇಶದ ಮತದಾರ ತುದಿಗಾಲಲ್ಲಿ ನಿಂತಿದ್ದಾನೆ   ಎಂದು ಆಶಾಭಾವನೆ ವ್ಯಕ್ತಪಡಿಸಿದರು.  ರೇಣುಕುಮಾರ್ ಅವರು ತಾಲೂಕು ಘಟಕಕ್ಕೆ ನೇಮಕಗೊಂಡ ಪದಾಧಿಕಾರಿಗಳಿಗೆ ಪಕ್ಷದ ಶಾಲನ್ನು ಹೊದಿಸುವ ಮೂಲಕ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು.  ಜಿಲ್ಲಾ ಬಿಜೆಪಿ ಮುಖಂಡರಾದ ಪರ್ವತಯ್ಯ, ಜಿಲ್ಲಾ ಸಂಚಾಲಕ ಮೈಲಾರಯ್ಯ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.