ಹಾಸನ

ಬೀದಿ ಕಾಮಣ್ಣ ಪೊಲೀಸರ ವಶಕ್ಕೆ

Published On :

ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿಯೊಬ್ಬ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಚುಡಾಯಿಸಿದ ಪರಿಣಾಮ, ಪೊಲೀಸರ ಅತಿಥಿಯಾಗಿರುವ ಘಟನೆ ಮಂಗಳವಾರ ನಡೆದಿದೆ.  ಕಾಲೇಜಿನ ಹಳೆ ವಿದ್ಯಾರ್ಥಿ ಎರಡು ದಿನಗಳ ಹಿಂದೆ ಕಾಲೇಜಿನ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದ, ಈ ಸಂಬಂಧ ಪೊಲೀಸರಿಗೆ ವಿಷಯ ಮುಟ್ಟಿಸಲಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸರು ಕಾಲೇಜಿಗೆ ಬಂದು ಆತನನ್ನು ವಶಕ್ಕೆ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಆತನ ಬಳಿ ನಕಲಿ ಬಸ್ ಪಾಸ್ ಇದ್ದದ್ದು ಪತ್ತೆಯಾಗಿದೆ. ಆತ ಕಾಲೇಜನ್ನು ಬಿಟ್ಟು ಹೋಗಿದ್ದರೂ ಕಾಲೇಜಿನ ಪಾಸ್ ಆತನ ಬಳಿ ಇದ್ದದ್ದು ಪತ್ತೆಯಾಗಿರುವುದರಿಂದ ಈ ಬಗ್ಗೆ ಪೊಲೀಸರು ಕಾಲೇಜಿಗೆ ಬಂದು ಪ್ರಶ್ನಿಸಿದ್ದಾರೆ. ಆತನಿಗೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಸಹಾಯ ಮಾಡಿರುವುದು ಪತ್ತೆಯಾಗಿದೆ. ಆದರೆ ವಿದ್ಯಾರ್ಥಿಗಳು ತಾವು ಆತನಿಗೆ ಸಹಾಯ ಮಾಡಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲರೊಂದಿಗೆ ವಾಗ್ವಾದ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.