ಹಾಸನ

ಸ್ತ್ರೀಶಕ್ತಿ ಸಂಘ ಕಟ್ಟಡಕ್ಕೆ ಅನುದಾನ: ರುದ್ರೇಶ್ಗೌಡ

Published On :

ಬೇಲೂರು: ಶಾಸಕರ ನಿಧಿಯಿಂದ ಸ್ತ್ರೀ ಶಕ್ತಿ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಪ್ರತಿ ವರ್ಷ ರು. 5 ಲಕ್ಷ ನೀಡಲಾಗುತ್ತದೆ. ಅಲ್ಲದೆ, ಒಂದು ಸಂಘದ ಕಟ್ಟಡಕ್ಕೆ ತಲಾ ರು. 3  ಲಕ್ಷ ನೀಡಲಾಗುತ್ತದೆ ಎಂದು ಶಾಸಕ ವೈ.ಎನ್.ರುದ್ರೇಶಗೌಡ ತಿಳಿಸಿದರು.
ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಸ್ವ ಸಹಾಯ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  
ಸ್ವ ಸಹಾಯ ಸಂಘಗಳು ಮತ್ತು ಸ್ತ್ರೀಶಕ್ತಿ ಸಂಘಗಳು ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು, ಮರದ ಕೆಳಗೆ ಮತ್ತು ದೇವಾಲಯದಲ್ಲಿ ಸಂಘ  ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಸಕರ ನಿಧಿಗೆ ಬರುವ ಅನುದಾನ ಉಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.  
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ರಾಜ್ಯದಲ್ಲಿ ಉತ್ತಮವಾಗಿ ನಡೆಯುತ್ತಿದ್ದು, ಗ್ರಾಮಗಳಲ್ಲಿ ಸ್ವಾಲಂಭನೆಯ ಅರಿವು ಮೂಡಿಸಿದೆ ಎಂದರು.
ಪುರಸಭೆ ಸದಸ್ಯ ಹಾಗೂ ಬೇಲೂರು ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಬಿ.ಎಲ್. ಧರ್ಮೇಗೌಡ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಮಾನ್ಯ ಶಾಸಕರು ಆಶ್ರಯ ಸಮಿತಿ ಅಧ್ಯಕ್ಷರಾದ ಕಾರಣ ಅವರು ನಿವೇಶವನ್ನು ನೀಡಬೇಕು ಎಂದು ಮನವಿ ಮಾಡಿದರು. ಅಲ್ಲದೆ ಮಹಿಳೆಯರ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿಯಾಗುತ್ತದೆ ಎಂದು ತಿಳಿಸಿದರು.
ಮೈಸೂರು ವಿಭಾಗದ ಎ.ಶ್ರೀಹರಿ ಮಾತನಾಡಿ, ಶ್ರೀಕ್ಷೇತ್ರ ದ ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಂತೆ ರಾಜ್ಯದಲ್ಲಿ ಗ್ರಾಮೀಣ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದೆ.  
 ಸಂಸ್ಥೆಅಡಿಯಲ್ಲಿ ಬರುವ ಸ್ವ ಸಹಾಯ ಸಂಘಗಳು ಸುಮಾರು 4 ಲಕ್ಷದಿಂದ 40 ಲಕ್ಷ ಹಣ ಸಾಲವನ್ನು ಬ್ಯಾಂಕಿನಿಂದ ಪಡೆದುಕೊಂಡು ಉತ್ತಮ ವ್ಯವಹಾರ ಮಾಡಿದ್ದಾರೆ. ಮಾತ್ರವಲ್ಲ, ಉಳಿತಾಯ ಮತ್ತು ಸಾಲಕ್ಕೆ ಸೀಮಿತವಾಗದೆ ಜನಪರ ಮತ್ತು ಸಮಾಜಿಕ ಚಟುವಟಿಕೆಯಲ್ಲಿ ಕೆಲಸ ಮಾಡುತ್ತಿದೆ ಎಂದರು.
ವಕೀಲ ವೈ.ಸಿ.ಮೋಹನ್, ಹಾಸನ ವಿಭಾಗದ ಜಯಶೀಲ, ಬೇಲೂರು ವಿಭಾಗದ ಗಾಯತ್ರಿ ಇನ್ನು ಮುಂತಾದವರು ಹಾಜರಿದ್ದರು. ಇದೇ ಸಂದರ್ಭದಲ್ಲಿ ತಾಲೂಕಿನ ಬಹುತೇಕ ಸಂಘದ ಸದಸ್ಯರಿಗೆ ಪುಸ್ತಕ ಮತ್ತು ಬ್ಯಾಗ್ ಅಗತ್ಯ ಪರಿಕರಗಳನ್ನು ಶಾಸಕರ ಸಮುಖದಲ್ಲಿ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.