ಹಾಸನ

ಸುಸಜ್ಜಿತ ಕ್ರೀಡಾಂಗಣ ಸ್ಥಾಪನೆಗೆ ಒತ್ತಾಯ

Published On :

ಅರಸೀಕೆರೆ: ಪಟ್ಟಣದಲ್ಲಿ ಒಂದು ಸುಸಜ್ಜಿತ ಕ್ರೀಡಾಂಗಣ ಸ್ಥಾಪಿಸಿ, ವಿದ್ಯಾರ್ಥಿಗಳ ಆಟೋಟಗಳಿಗೆ ಉತ್ತೇಜನ ನೀಡಿದರೆ ಆರೋಗ್ಯವಂತ, ದೃಢಕಾಯ ಯುವಕರು ಈ ದೇಶದ ಆಸ್ತಿಯಾಗಲಿದ್ದಾರೆ ಎಂಬ ವಿವೇಕಾನಂದರ ನುಡಿಗಳನ್ನು ಪಾಲಿಸಿದರೆ ಉತ್ತಮ ದೈಹಿಕ ಆರೋಗ್ಯ ಪಡೆದುಕೊಳ್ಳಬಹುದು ಎಂದು ತಿಪಟೂರು ಪಲ್ಲಾಘಟ್ಟಿ ಅಡವಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಿ.ಎಸ್.ನಂಜೇಗೌಡ ಅಭಿಪ್ರಾಯಪಟ್ಟರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಮಾನ್ಯ ಶಿಕ್ಷಣಕ್ಕೂ, ದೈಹಿಕ ಶಿಕ್ಷಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಈ ನಿಟ್ಟಿನಲ್ಲಿ ಸಾಮಾನ್ಯ ಶಿಕ್ಷಣ ಜ್ಞಾನವನ್ನು ಸಂಪಾದನೆ ಮಾಡಿದರೆ ದೈಹಿಕ ಶಿಕ್ಷಣ ದೇಹಕ್ಕೆ ಆರೋಗ್ಯ ಒದಗಿಸುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳನ್ನು ಬೆಟ್ಟಿಂಗ್, ದಂಧೆಯಾಗಿ ಪರಿವರ್ತಿಸಿಕೊಳ್ಳುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಇವುಗಳಿಂದ ಹೊರಬಂದು ಉತ್ತಮ ಆರೋಗ್ಯಕರ ಹವ್ಯಾಸಗಳತ್ತ ತಮ್ಮನ್ನು ತೊಡಗಿಸಿಕೊಂಡರೆ ಸಮಾಜದ ಸ್ವಾಸ್ಥ್ಯ ಮತ್ತಷ್ಟು ಹೆಚ್ಚುತ್ತದೆ ಎಂದರು.
ಪ್ರಾಂಶುಪಾಲ ಪ್ರೊ. ಸೈಯದ್ ಪಾಷ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸುಖ ದುಃಖಗಳನ್ನು ಸಮನಾಗಿ ತೆಗೆದುಕೊಂಡು ಬದುಕನ್ನು ಎದುರಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರು.
ಕಾಲೇಜು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥ ವಿಶ್ವನಾಥ್ ವಂದಿಸಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಕೆ.ವಿ. ನಿರ್ವಾಣಸ್ವಾಮಿ, ಕಾಲೇಜು ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.