ಡಾ. ರಾಧಾಕೃಷ್ಣನ್ ಜನ್ಮದಿನಾಚರಣೆ, ಜಿಲ್ಲಾ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಇಂದು
ಹಾಸನ: ಜಿಲ್ಲಾ ಆಡಳಿತ, ಜಿಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸೆ. 5 ರಂದು ಬೆಳಗ್ಗೆ 10 ಕ್ಕೆ ಡಾ. ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಏರ್ಪಡಿಸಲಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಉಪಸ್ಥಿತಿಯಲ್ಲಿ ಉಸ್ತುವಾರಿ ಸಚಿವ ಡಾ. ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್.ಎಸ್.ಪ್ರಕಾಶ್ ಅಧ್ಯಕ್ಷತೆ ವಹಿಸುವರು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಅಂಬಿಕಾ ರಾಮಣ್ಣ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಎಚ್.ಕೆ ಕುಮಾರ ಸ್ವಾಮಿ, ವೈ.ಎನ್.ರುದ್ರೇಶಗೌಡ, ಕೆ.ಎಂ.ಶಿವಲಿಂಗೇಗೌಡ, ಎ.ಮಂಜು, ಸಿ.ಎನ್.ಬಾಲಕೃಷ್ಣ, ಪಟೇಲ್ಶಿವರಾಂ, ಗೊ.ಮಧುಸೂದನ್, ಮರಿತಿಬ್ಬೇಗೌಡ, ಬಿ.ಬಿ.ಶಿವಪ್ಪ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಬಿಳಿಚೌಡಯ್ಯ, ಶಿಕ್ಷಣ ಮತ್ತು ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣಗೌಡ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ರತ್ನಮ್ಮ ಹನುಮಂತೇಗೌಡ ಇತರರು ಭಾಗವಹಿಸುವರು.
ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2013-14 ನೇ ಸಾಲಿಗಾಗಿ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸೆ. 5 ರಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಾಥಮಿಕ ಶಾಲಾ ವಿಭಾಗ
ದಾಕ್ಷಾಯಿಣಿ ಎಚ್.ಡಿ ಸಹಶಿಕ್ಷಕಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಲೂರು, ಪಾಂಡುರಂಗಸ್ವಾಮಿ ಮುಖ್ಯ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೇಲಿಕರ್ಪೂರವಳ್ಳಿ ಅರಕಲಗೂಡು ತಾ. ಅಡವಿಸ್ವಾಮಿ. ಮುಖ್ಯಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಸನ ರಸ್ತೆ ಅರಸೀಕೆರೆ ತಾ. ರೆಹಮತ್ ಉಲ್ಲಾ ಮುಶಿ ಸಹ ಶಿಕ್ಷಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಸಾದಿಹಳ್ಳಿ ಬೇಲೂರು ತಾ. ಹೆಚ್.ಪಿ. ಕುಮಾರಸ್ವಾಮಿ ಸಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಣತಿ ಚನ್ನರಾಯಪಟ್ಟಣ ತಾ. ಡಿ ರಮೇಶ ಸಹ ಶಿಕ್ಷಕ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಳಗೋಡು ಹಾಸನ ತಾ. ಚಂದ್ರಶೇಖರ ಹೆಚ್ಚ್ವಿ ಮು.ಶಿ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾಕನಹಳ್ಳಿ ಹೊಳೆನರಸೀಪುರ ತಾ. ಗೊ.ರಾ ಭಾಗೀರಥಿ ಬಡ್ತಿ ಮುಖ್ಯ ಶಿಕ್ಷಕಿ ಸರ್ಕಾರಿ ಹಿ ಪ್ರಾಥಮಿಕ ಶಾಲೆ, ವಣಗೂರು ಸಕಲೇಶಪುರ ತಾ.
ಪ್ರೌಢ ಶಾಲಾ ವಿಭಾಗ
ಎಂ.ಜಿ ಮಂಜುನಾಥ ಸಹಶಿಕ್ಷಕ ಮರುಳಸಿದ್ದೇಶ್ವರ ಸ್ಮಾರಕ ನಾಗಸಮುದ್ರ ಶಿಖರಣ್ಣ ಪ್ರೌಢಶಾಲೆ ಬೆಂಡೇಕೆರೆ ಅರಸೀಕೆರೆ ತಾ, ಶಿವನಗೌಡ ಪಾಟೀಲ ಸಹ ಶಿಕ್ಷಕ ಸರ್ಕಾರಿ ಪ್ರೌಢಶಾಲೆ ಸಂತೆಮೈದಾನ ಚನ್ನರಾಯಪಟ್ಟಣ ತಾ. ಎಚ್.ಎಸ್. ವೆಂಕಟೇಶ ಸರ್ಕಾರಿ ಪ್ರೌಢಶಾಲೆ ದೊಡ್ಡಕೊಂಡಗುಳ ಹಾಸನ ತಾ, ಎಸ್.ಎಂ.ದೇವರಾಜೇಗೌಡ ಸಹ ಶಿಕ್ಷಕ ವೆಂಕಟೇಶ್ವರ ಪ.ಪೂ.ಕಾ. ಹಾಸನ ಪ್ರೌಢಶಾಲಾ ವಿಭಾಗ, ಚಂದ್ರಶೇಖರ ಚಿತ್ರಕಲಾ ಶಿಕ್ಷಕರು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಹೊಳೆನರಸೀಪುರ ಇವರು ಪ್ರಶಸ್ತಿ ಪುರಸ್ಕೃತರಾಗಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್. ಬಸವರಾಜ ತಿಳಿಸಿದ್ದಾರೆ.
ಪ್ರಶಸ್ತಿ ಪುರಸ್ಕತರು ಈ ಕಾರ್ಯಕ್ರಮಕ್ಕೆ ಸಕಾಲದಲ್ಲಿ ಆಗಮಿಸಿ ಸಮಾರಂಭವನ್ನು ಯಶಸ್ವಿಗೊಳಿಸಲು ಕೋರಿದೆ. ಹಾಗೂ ಎಲ್ಲಾ ಪ್ರಶಸ್ತಿ ಪುರಸ್ಕತರು ಕಾರ್ಯಕ್ರಮಕ್ಕೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಿ ಹೆಸರನ್ನು ನೊಂದಣಿ ಮಾಡಿಕೊಳ್ಳಲು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

