ಹಾಸನ

ವಿದ್ಯಾರ್ಥಿ ದೆಸೆಯಿಂದಲೆ ಶಿಸ್ತು ರೂಢಿಸಿಕೊಳ್ಳಿ

Published On :

ಹಾಸನ: ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಸಂಯಮ, ಸಮಯಪಾಲನೆ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಸತ್ಪ್ರಜೆಯಾಗಲು ಸಾಧ್ಯ ಎಂದು ಮೈಸೂರಿನ ಪ್ರೊ.ಎನ್.ನಾಗರಾಜ್ ತಿಳಿಸಿದ್ದಾರೆ. ನಗರದ ಸಂತಫಿಲೋಮಿನಾ ವಿದ್ಯಾಸಂಸ್ಥೆಯಲ್ಲಿ ನಡೆದ ಪದವಿ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಂಶುಪಾಲ ರೆವರೆಂಡ್ ಸಿ. ಜಾಸ್ಮಿನ್ ಮಾತನಾಡಿ ಭಾರತದ ಆರ್ಥಿಕ ಪರಿಸ್ಥಿತಿ ಬಹಳ ಹಿಂದುಳಿದಿದ್ದು ಇದನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ವಿದ್ಯಾರ್ಥಿಗಳು ಶ್ರಮಿಸಬೇಕು. ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ  ರೆವರ್ಡ್ ಫಾದರ್ ಜಾನ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು. ರೂಪರಾವ್, ಡೇವಿಡ್ಕುಮಾರ್ ಇದ್ದರು. ಸದಾನಂದ ನಿರೂಪಿಸಿದರು. ಚಿರಂತ್ ಸ್ವಾಗತಿಸಿದರು. ರಾಘವ್ ವಂದಿಸಿದರು.
'ಯುವ ಸಮುದಾಯ ಶಕ್ತಿಶಾಲಿಯಾಗಬೇಕು'
ಸಕಲೇಶಪುರ: ಮನುಕುಲದ ಕಲ್ಯಾಣಕ್ಕಾಗಿ ತನ್ನದೆ ಆದ ಕೊಡುಗೆ ನೀಡಲು ಭಾರತದ ಯುವ ಸಮುದಾಯ  ಶಕ್ತಿಶಾಲಿಯಾಗಿ ಎದ್ದು ನಿಲ್ಲಬೇಕಾದ ಅನಿವಾರ್ಯತೆ ಇದೆ ಎಂದು ಹೊ.ಸು.ರಮೇಶ್ ಹೇಳಿದರು.  ಪಟ್ಟಣದ ಲಯನ್ಸ್ ಹಾಲ್ನಲ್ಲಿ ನಡೆದ ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಮಿಕೊಳ್ಳಲಾಗಿದ್ದ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ಜನಸಂಖ್ಯೆಯಲ್ಲಿ ಶೇ. 55 ರಷ್ಟು ಯುವಕರೇ ಇರುವ ವಿಶ್ವದ ಏಕಮಾತ್ರ ದೇಶವಾಗಿ ಇಂದು ಭಾರತವಿರುವುದು ನಮ್ಮ ಸೌಭಾಗ್ಯವಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.