ಬೈಲಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ
ಕ.ಪ್ರ.ವಾರ್ತೆ ಹಾಸನ ಸೆ. 4
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೈಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. 800 ಮೀ, 1500 ಮೀ. ಓಟದಲ್ಲಿ ವರಲಕ್ಷ್ಮಿ ಪ್ರಥಮ ಸ್ಥಾನ, 3000 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ವೈಯುಕ್ತಿಕ ಚಾಂಪಿಯನ್ ಪಡೆದಿದ್ದಾಳೆ.
ಬಿ.ಜೆ. ಕವಿತ, 100 ಮೀ ಓಟ 4್ಢ100 ರಿಲೇಯಲ್ಲಿ ಪ್ರಥಮ, 200 ಓಟದಲ್ಲಿ ದ್ವಿತೀಯ, ರಮ್ಯ 400 ಮೀ. ಓಟ, 4್ಢ100 ರಿಲೇ, ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ, ಸಂಧ್ಯಾ 400 ಮೀ. 200 ಮೀ, 100 ಮೀ. ಓಟದಲ್ಲಿ ತೃತೀಯ ಸ್ಥಾನ, 4್ಢ100 ರಿಲೇಯಲ್ಲಿ ಪ್ರಥಮ, ಪುಷ್ಪಲತಾ 800 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕರ ವಿಭಾಗದಲ್ಲಿ ಸಿ.ಆರ್. ಪ್ರತಾಪ್ 400 ಮೀ. ಓಟದಲ್ಲಿ ಪ್ರಥಮ, 200 ಮೀ. ಓಟ, 4್ಢ100 ರಿಲೇಯಲ್ಲಿ ತೃತೀಯ ಸ್ಥಾನ, ರುದ್ರೇಶ್ 800 ಮೀ, 1500 ಮೀ. ಓಟದಲ್ಲಿ ದ್ವಿತೀಯ, 4್ಢ100 ರಿಲೇ, 3000 ಮೀ. ಓಟದಲ್ಲಿ ತೃತೀಯ ಸ್ಥಾನ, ಬಿ.ಆರ್. ಪೂರ್ಣೇಶ್ ಹ್ಯಾಮರ್ ಥ್ರೋನಲ್ಲಿ ತೃತೀಯ ಸ್ಥಾನ, ಸೋಮಶೇಖರ್ 4್ಢ100 ರಿಲೇಯಲ್ಲಿ ತೃತೀಯ, ವೆಂಕಟೇಶ್ 4್ಢ100 ರಿಲೇಯಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಪಟುಗಳನ್ನು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

