ಗುರು, ಗುರಿ ಇಲ್ಲದ ಜೀವನ ನಶ್ವರ: ಶಾಸಕ ಕುಮಾರಸ್ವಾಮಿ
ಕನ್ನಡಪ್ರಭ ವಾರ್ತೆ ಸಕಲೇಶಪುರ ಸೆ. 5
ಗುರು ಹಾಗೂ ಗುರಿ ಇಲ್ಲದ ಜೀವನ ನಶ್ವರ ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಡಾ.ರಾಧಾಕೃಷ್ಣನ್ 125 ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುರು ಇಲ್ಲದ ಜನರಿಲ್ಲ ಪ್ರತಿಯೊಬ್ಬ ಮನುಷ್ಯನ ಭವಿಷ್ಯ ರೂಪಿತವಾಗುವುದರ ಹಿಂದೆ ಶಿಕ್ಷಕರ ಪಾತ್ರವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಕರ ಬಗ್ಗೆ ಗೌರವ ಕಡಿಮೆಯಾಗುತ್ತಿದೆ ಎಂದರು.
ಉಪವಿಭಾಗಧಿಕಾರಿ ಶ್ರೀವಿದ್ಯಾ ಮಾತನಾಡಿ, ವಿದ್ಯಾರ್ಥಿಗಳ ಪಾಲಿಗೆ ದೇವರ ಸ್ವರೂಪವಾಗಿರುವ ಶಿಕ್ಷಕರು, ತಮ್ಮ ಘನತೆಗೆ ಕುಂದು ತರುವಂತಹ ಕೆಲಸ ಮಾಡಬಾರದು. ಶಿಕ್ಷಣದೊಂದಿಗೆ ಸಂಸ್ಕಾರ,ಮೌಲ್ಯಾಧಾರಿತ ವಿಚಾರಗಳನ್ನು ಕಲಿಸುವ ಮೂಲಕ, ಸಮಾಜಕ್ಕೆ ಉತ್ತಮ ಪ್ರಜೆಗಳನ್ನೂ ಕೊಡುಗೆಯಾಗಿ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಹೊಳೆನರಸೀಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಶಂಪಾಲ್ ಇರ್ಷಾದ್ ಉಪನ್ಯಾಸ ನೀಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣದ ಹೊಣೆ ಹೊತ್ತಿರುವ ಶಿಕ್ಷಕರು ಪ್ರಸ್ತುತ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು ಸರಕಾರ ಶಿಕ್ಷಕರ ಬಗ್ಗೆ ನಿರ್ಲಕ್ಷಧೋರಣೆ ಹೊಂದಿದೆ ಎಂದರು. ನಿವೃತ್ತ ಶಿಕ್ಷಕರಾದ, ಮಂಜುಳಾ, ಪೈಜುನಿಸ್, ಗ್ರೇಸಿಕಾರ್ಡೊಜಾ, ಬಲ್ಕಿಸ್ಬಾನು,ಪುಟ್ಟರಾಜು, ಸುಬ್ರಮಣ್ಯ, ಮುತ್ತಯ್ಯ, ಹುಚ್ಚಗೌಡ, ಚಂದ್ರಶೇಖರ್ ನಂಜಪ್ಪ ಅವರನ್ನು ಲಯನ್ ಸಂಸ್ಥೆಯಿಂದ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

