ಹಾಸನ

ಶಿಕ್ಷಕ ವೃತ್ತಿಗೆ ಜಾತಿ ಲೇಪ ಸಲ್ಲದು

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಸೆ. 5
ಶಿಕ್ಷಕ ವೃತ್ತಿಯಲ್ಲಿ ಯಾವುದೇ ರಾಜಕೀಯ ಅಥವಾ ಜಾತಿ ಲೇಪ ಹಚ್ಚದೆ ಶಿಕ್ಷಕರು ತಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯ, ಸುಖಿ ರಾಜ್ಯ ಸ್ಥಾಪನೆ, ಉತ್ತಮ ಗುಣಮಟ್ಟದ ಸಮಾಜ ನಿರ್ಮಾಣ ಮಾಡುವಂತಹ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಸಾಂಸ್ಕೃತಿಕ ನಾಯಕತ್ವ, ಭಾರತೀಯವೆಂಬ ಭಾವನೆ ಸೇರಿದಂತೆ ಇತರೆ ಅಂಶಗಳನ್ನು ಶಿಕ್ಷಣದಲ್ಲಿ ಅಳವಡಿಸಿ ಸಿದ್ದಾಂತಗಳನ್ನು ಪಾಲಿಸಬೇಕಾದ ಜವಾಬ್ದಾರಿ ಶಿಕ್ಷಕರದ್ದಾಗಿದೆ. ಶಿಕ್ಷಕರು ಯಾವುದೇ ಆತಂಕ, ಗುಂಪಿಗೆ ಸೇರಿದೆ ನಿಭೀರ್ತಿಯಿಂದ ಕೆಲಸ ಮಾಡಬೇಕು. ವಿದ್ಯಾರ್ಥಿಯನ್ನು ದೇಶದ ಉತ್ತಮ ಪ್ರಜೆಯನ್ನಾಗಿ ಮಾಡುವಂತಹ ಜವಾಬ್ದಾರಿ ಪ್ರತಿ ಶಿಕ್ಷಕನದಾಗಿದ್ದು, ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಹೇಳಿದರು.
ಶಿಕ್ಷಕ ಸಮಾಜದ ಶಿಲ್ಪಿ:  ಪ್ರಧಾನ ಭಾಷಣ ಮಾಡಿದ ಶಿಕ್ಷಕ ಮೋಹನ್‌ಕುಮಾರ್, ಸಮಾಜದಲ್ಲಿ ಯಾವುದೇ ಕೆಲಸವನ್ನು ಮಾಡಬೇಕಾದರೂ ಉತ್ತಮ ಧ್ಯೇಯ ಹೊಂದಿರಬೇಕು. ಸಮಾಜದಲ್ಲಿ ಶಿಕ್ಷಕನ ಮೇಲೆ ನಿರೀಕ್ಷೆ ಹೆಚ್ಚಿದೆ ಹಾಗೂ ಅವರನ್ನು ನೋಡುವಂತಹ ದೃಷ್ಟಿಕೋನ ಸಹ ಬೇರೆಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕ ಸಮಾಜದ ಶಿಲ್ಪಿ ಎಂದರು.
 ಶಿಕ್ಷಕರು ನಿರಂತರ ಅಧ್ಯಯನ ನಡೆಸುವ ಮೂಲಕ ಮಕ್ಕಳಲ್ಲಿ ಜ್ಞಾನ ವೃದ್ಧಿಸಬೇಕಾಗಿದೆ ಎಂದು ಹೇಳಿದರು.
ಉತ್ತಮ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಾಸಕ ಎಚ್.ಎಸ್.ಪ್ರಕಾಶ್, ಜಿಪಂ ಅಧ್ಯಕ್ಷೆ ಅಂಬಿಕಾ ರಾಮಣ್ಣ, ಉಪಾಧ್ಯಕ್ಷ ಬಿಳಿ ಚೌಡಯ್ಯ, ಸದಸ್ಯ ಲಕ್ಷ್ಮಣ್, ತಾಪಂ ಅಧ್ಯಕ್ಷೆ ರತ್ನಮ್ಮ ಹನುಮೇಗೌಡ, ಮಾಜಿ ಶಾಸಕ ಎಸ್.ಎಂ.ಆನಂದ್, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್, ಡಿಡಿಪಿಐ ಬಸವರಾಜು, ರಾಮಚಂದ್ರನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.