ಹಾಸನ

ಶಿಕ್ಷಣ ಅಭಿವೃದ್ಧಿಗೆ ಪೂರಕ ಯೋಜನೆ ರೂಪಿಸಿ: ರೇವಣ್ಣ

Published On :

ಹೊಳೆನರಸೀಪುರ: ಅಗ್ಗದ ದರದಲ್ಲಿ ಅಕ್ಕಿಯನ್ನು ಕೊಟ್ಟರೆ ಎಲ್ಲರೂ ಮತ ಹಾಕುತ್ತಾರೆ ಎನ್ನುವ ಭ್ರಮೆಯನ್ನು ಬದಿಗಿರಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಪ್ರಗತಿಪರ ಯೋಜನೆಗಳನ್ನು ರೂಪಿಸುವ ಮೂಲಕ ಶಿಕ್ಷಕರ ಮೂಲಭೂತ ಸಮಸ್ಯೆಗಳನ್ನು ಹೋಗಲಾಡಿಸುವ ಬಗ್ಗೆ ಚಿಂತನೆ ನಡೆಸುವಂತೆ ಶಾಸಕ ಎಚ್.ಡಿ.ರೇವಣ್ಣ  ಒತ್ತಾಯಿಸಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರ ದಿನಾಚರಣೆಗೆ ಅರ್ಥ ಬರುವಂತಾಗಲು ಸರ್ಕಾರ ಪ್ರತಿ ವರ್ಷ ಡಾ. ರಾಧಾಕೃಷ್ಣನ್ ಹೆಸರಿನಲ್ಲಿ ಪ್ರತಿ ತಾಲೂಕಿನಲ್ಲಿಯೂ ಪ್ರತಿಭಾವಂತ ಶಿಕ್ಷಕರನ್ನು ಗುರುತಿಸುವ ಮೂಲಕ ಅವರಿಗೆ 1ಲಕ್ಷ ರು.ಗಳ ನಗದು ಬಹುಮಾನ ನೀಡುವ ಮೂಲಕ ಅವರ ಶೈಕ್ಷಣಿಕ ಜೀವನವನ್ನು ಉತ್ತೇಜಿಸುವಂತೆ ಸಲಹೆ ನೀಡಿದ ಎಚ್.ಡಿ.ರೇವಣ್ಣ ಅವರು, ಇವೆಲ್ಲವುಗಳ ನಡುವೆ ಕರ್ತವ್ಯದ ಸಂದರ್ಭದಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪಾಠ ಪ್ರವಚನಗಳನ್ನು ನಡೆಸುವಂತೆ ಕಿವಿಮಾತು ಹೇಳಿದರು. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಮಟ್ಟಿನ ಶಿಕ್ಷಣವನ್ನು ನೀಡುವಂತೆ ಶಿಕ್ಷಕರಿಗೆ ಕಿವಿಮಾತು ಹೇಳಿದರು.
  ಗೊರೂರಿನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಅನುಸೂಯ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಅಧ್ಯಕ್ಷೆ ಪುಷ್ಪಾ ಗೌಡೇಗೌಡ, ಜಿಪಂ ಸದಸ್ಯ ಎಚ್.ಎನ್.ದೇವೇಗೌಡ(ಪಾಪಣ್ಣಿ), ಗೌರಮ್ಮ, ತಾಪಂ ಉಪಾಧ್ಯಕ್ಷ ನಂಜುಂಡಪ್ಪ, ಎಚ್.ಕೆ.ಮಂಜುನಾಥ್, ಜವರೇಗೌಡ, ಎ.ನಾಗರಾಜ್, ಕೆ.ಕೆ.ಲೋಕೇಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.