ಸುದ್ದಿ ಸಂಕ್ಷೇಪ
ಇಂದಿನಿಂದ ಉಂಡೆ ಕೊಬ್ಬರಿ ಖರೀದಿ
ಹಾಸನ: ಅರಸೀಕೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ರೈತರಿಂದ ಸೆ. 6 ರಿಂದ ಉಂಡೆ ಕೊಬ್ಬರಿಯನ್ನು ಖರೀದಿಸಲಾಗುವುದು. ಸೆ 6ರಂದು ಜೇಷ್ಠತಾ ಕ್ರಮಸಂಖ್ಯೆ 1439 ರಿಂದ 1513, ಹಾಗೂ 2352 ರಿಂದ 2525 ರವರೆಗೆ ಖರೀದಿಸಲಾಗುವದು, ಸೆಪ್ಟಂಬರ್ 7ರಂದು 1514 ರಿಂದ 1588 ರವರೆಗೆ ಹಾಗೂ 2527 ರಿಂದ 2601ವರೆಗೆ ಖರೀದಿಸಲಾಗುವುದು. ಸೆಪ್ಟಂಬರ್ 10ರಂದು 1589ರಿಂದ 1663 ಹಾಗೂ 2602 ರಿಂದ 2676 ರವರೆಗೆ ಖರೀದಿ, ಸೆಪ್ಟಂಬರ್ 11ರಂದು 1664ರಿಂದ 1810 ರವರೆಗೆ ಮತ್ತು 2677 ರಿಂದ 2751ರವರೆಗೆ ಖರೀದಿ, ಸೆಪ್ಟಂಬರ್ 12ರಂದು 1811ರಿಂದ 1885ರವರೆಗೆ ಹಾಗೂ 2752 ರಿಂದ 2826 ರವರೆಗೆ ಖರೀದಿ, ಸೆಪ್ಟಂಬರ್ 13ರಂದು 1886ರಿಂದ 1911ರವರೆಗೆ ಮತ್ತು 2827ರಿಂದ 2950ರವರೆಗೆ ಖರೀದಿಸಲಾಗುವುದು. ರೈತರು ತಮ್ಮ ಕೊಬ್ಬರಿಯನ್ನು ಮಾರುಕಟ್ಟೆ ಪ್ರಾಂಗಣದ ಖರೀದಿ ಕೇಂದ್ರಕ್ಕೆ ತರುವುದು ಎಂದು ಅರಸೀಕೆರೆ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.
ಪದಾಧಿಕಾರಿಗಳ ಆಯ್ಕೆ
ಹಾಸನ: ನಗರದ ಬಿಜೆಪಿ ಕಚೇರಿಯಲ್ಲಿ ನೂತನ ಜಿಲ್ಲಾ ಯುವ ಮೋರ್ಚಾ ಮತ್ತು ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಚನ್ನಕೇಶವ (ಧರ್ಮ), ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎನ್.ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಿಜಯಕುಮಾರ್ ಆಯ್ಕೆಯಾದರು. ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಎಂ.ಆರ್.ರವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಂ.ಪಾಲಾಕ್ಷಮೂರ್ತಿ ನೇಮಕಗೊಂಡರು.
ಇಂದು ವಿದ್ಯುತ್ ವ್ಯತ್ಯಯ
ಹಾಸನ: ತುರ್ತು ಕಾರ್ಯ ನಿಮಿತ್ತಸೆ. 6 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಹೊನ್ನಾವರ, ವೇದಾವತಿ, ಜಾಡಘಟ್ಟ, ಸಿದ್ದಾಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ಸ್ರಬರಾಜಿನಲ್ಲಿ ವ್ಯತ್ಯಯವಾಗಲಿದೆ, ಸಾರ್ವಜನಿಕರು ಸಹಕರಿಸಬೇಕೆಂದು ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ ನೋಡಲ್ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವಿ ಕೋರಿದ್ದಾರೆ.
ಇಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ
ಹಾಸನ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಸೆ. 6 ರಂದು ಬೆಳಿಗ್ಗೆ 11ಕ್ಕೆ ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧ್ಯಕ್ಷ ವಿ.ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಆರ್.ಡಿ.ಅಲ್ಮೇಡ ತಿಳಿಸಿದ್ದಾರೆ. ಸಾರ್ವಜನಿಕರು ಸಾರಿಗೆ ವಿಚಾರದಲ್ಲಿ ಕುಂದುಕೊರತೆಗಳಿದ್ದಲ್ಲಿ ಅಹವಾಲುಗಳನ್ನು ಪ್ರಾಧಿಕಾರದ ಸಭೆಯಲ್ಲಿ ಸಲ್ಲಿಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

