ಸುದ್ದಿ ಸಂಕ್ಷೇಪ
ಪ್ರೀತಿ, ವಿಶ್ವಾಸಗಳಿಂದ ಜನರ ಮನಸ್ಸು ಗೆಲ್ಲಲು ಸಾಧ್ಯ: ನಾರಾಯಣ್
ಅರಸೀಕೆರೆ: ಯುಗ ಯುಗಾಂತರಗಳಿಂದ ವಿಶ್ವದಲ್ಲಿ ಅಧರ್ಮ ಹೆಚ್ಚಾದಾಗ ಧರ್ಮ ಸ್ಥಾಪನೆಗಾಗಿ ಭಗವಂತ ಅನೇಕ ರೂಪದಲ್ಲಿ ಜನ್ಮತಾಳಿ ಧರ್ಮದ ಬೋಧನೆ ಮಾಡಿದ್ದಾನೆ. ಅಂತಹ ಅವತಾರ ಪುರುಷನಲ್ಲಿ ಶ್ರೀಕೃಷ್ಣನೂ ಒಬ್ಬ ಎಂದು ಜಿಲ್ಲಾ ಯಾದವ ಸಮಾಜದ ಕಾರ್ಯದರ್ಶಿ ನಾರಾಯಣ್ ಅಭಿಪ್ರಾಯಪಟ್ಟರು.
ಪಟ್ಟಣದ ಮಾಲೇಕಲ್ ತಿರುಪತಿಯಲ್ಲಿ ಆಯೋಜಿಸಲಾಗಿದ್ದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಗವದ್ಗೀತೆ ಮೂಲಕ ಪ್ರತಿಯೊಬ್ಬರಲ್ಲಿ ಕರ್ತವ್ಯ ಪ್ರಜ್ಞೆಯನ್ನು ಜಾಗೃತಗೊಳಿಸಿದ ಕೀರ್ತಿಗೆ ಪಾತ್ರನಾಗಿದ್ದಾನೆ ಎಂದು ಹೇಳಿದರು.
ಯಾದವ ಸಮುದಾಯ ರಾಜಕೀಯ, ಶೈಕ್ಷಣಿಕ ಸೇರಿದಂತೆ ವಿವಿಧ ಸೌಲಭ್ಯ ಪಡೆಯಬೇಕಾದರೆ ಒಗ್ಗಟ್ಟಿನ ಹೋರಾಟ ಅನಿವಾರ್ಯ. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.
ಮುಖಂಡ ಜವನಪ್ಪ ಮಾತನಾಡಿ, ಯಾದವರು ಪರಸ್ಪರ ಪ್ರೀತಿ, ವಿಶ್ವಾಸಗಳಿಂದ ಜನರ ಮನಸ್ಸು ಗೆಲ್ಲಲು ಸಾಧ್ಯ ಎಂದು ಭಾವಿಸುವ ಸಮುದಾಯವಾಗಿದೆ ಎಂದು ಹೇಳಿದರು. ಇದೇ ವೇಳೆ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಜಿಪಂ ಮಾಜಿ ಉಪಾಧ್ಯಕ್ಷ ಬಂಡಿಗೌಡ್ರು ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ಪಶು ಇಲಾಖೆಯ ಸಹಾಯಕ ನಿರ್ದ್ದೇಶಕ ಮಂಜುನಾಥ್, ಡಾ. ಬೆಳ್ಳಿಯಪ್ಪ, ಬಸವಲಿಂಗಪ್ಪ ಇನ್ನಿತರರು ಮಾತನಾಡಿದರು. ಮಹಲಿಂಗಪ್ಪ, ಎಪಿಎಂಸಿ ಸದಸ್ಯ ಅಜ್ಜಪ್ಪ ಇದ್ದರು. ಯುವ ಮುಖಂಡ ಸುಬ್ರಹಣ್ಯಬಾಬು ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

