ತೈಲ ಬೆಲೆ ಏರಿಕೆ: ಹಗ್ಗದಿಂದ ವ್ಯಾನ್ ಎಳೆದು ಪ್ರತಿಭಟನೆ
ಸಕಲೇಶಪುರ: ಮಾರುತಿ ವ್ಯಾನ್ನ್ನು ಹಗ್ಗದಲ್ಲಿ ಎಳೆಯುವ ಮೂಲಕ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟಿಸಿದ ಘಟನೆ ಗುರುವಾರ ಪಟ್ಟಣದಲ್ಲಿ ನಡೆಯಿತು.
ಕೇಂದ್ರ ಯುಪಿಎ ಸರ್ಕಾರದ ಅಸಮರ್ಪಕ ನೀತಿಗಳಿಂದಾಗಿ ಬಡವರು ಇನ್ನೂ ಬಡವರಾಗುತ್ತಿದ್ದರೆ. ಮಧ್ಯಮ ವರ್ಗ ಜೀವನ ನಡೆಸುವುದು ದುಸ್ಥರವಾಗುತ್ತಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಇನ್ನಿಲ್ಲದಂತೆ ಕುಸಿಯುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ತಲೆತಗ್ಗಿಸುವಂತಾಗಿದೆ. ಆರು ತಿಂಗಳ ಅವಧಿಯಲ್ಲಿ 10 ಬಾರಿ ಪೆಟ್ರೋಲ್ ಬೆಲೆ ಏರಿಸುವ ಮೂಲಕ ಎಲ್ಲಾ ಅಗತ್ಯವಸ್ತುಗಳ ಬೆಲೆ ಏರಿಕೆಗೆ ಕೇಂದ್ರದ ಯುಪಿಎ ಸರ್ಕಾರ ಕಾರಣವಾಗಿದೆ.
ಏರಿಕೆಗೊಂಡಿರುವ ಪೆಟ್ರೋಲ್, ಗ್ಯಾಸ್ ಸಿಲಿಂಡರ್ ಬೆಲೆ ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಉಪವಿಭಾಗಧಿಕಾರಿಗಳ ಕಚೇರಿವರೆಗೆ ಹಗ್ಗದ ಮೂಲಕ ವಾಹನ ಎಳೆದು ಗಮನ ಸೇಳದರು.
ಪ್ರತಿಭಟನೆ ನೇತೃತ್ವವನ್ನು ತಾಲೂಕು ಬಿಜೆಪಿ ಅಧ್ಯಕ್ಷ ಕ್ಯಾಮನಹಳ್ಳಿ ರಾಜ್ಕುಮಾರ್, ಕಾರ್ಯದರ್ಶಿ ಹೆಬ್ಬನಹಳ್ಳಿ ಸಂದೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜೈಮಾರುತಿ ದೇವರಾಜ್, ಪುರಸಭಾ ಸದಸ್ಯ ಮೋಹನ್, ಶೋಭಾವತಿ, ನಗರ ಘಟಕ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಪ್ರಶಾಂತ್ಶೆಟ್ಟಿ ಮುಂತಾದವರು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

