ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಹಾಸನ ಸೆ. 6
ಸರ್ಕಾರಿ ಕಾನೂನು ಕಾಲೇಜಿನ ತರಗತಿಗಳನ್ನು ನೂತನ ಕಟ್ಟಡದಲ್ಲಿ ನಡೆಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನೇತೃತ್ವದಲ್ಲಿ ಕಾನೂನು ವಿದ್ಯಾರ್ಥಿಗಳ ವೇದಿಕೆ ಕೈಗೊಂಡಿದ್ದ ಅನಿದಿರ್ಷ್ಟಾವಧಿ ಪ್ರತಿಭಟನೆ ಶುಕ್ರವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಾಲೇಜಿಗೆ ಹೋಗುವ ಮಾರ್ಗದಲ್ಲಿ ಹಾಕಿದ್ದ ತಂತಿ ಬೇಲಿಯನ್ನು ವಿದ್ಯಾರ್ಥಿಗಳು ತೆರವು ಗೊಳಿಸಿ ಪ್ರತಿಭಟನೆ ಮುಂದುವರಿಸಿದರು.
ಸರ್ಕಾರಿ ಕಾನೂನು ಕಾಲೇಜು ಸ್ವಂತ ಕಟ್ಟಡವಿಲ್ಲದೆ ಖಾಸಗಿ ಕಟ್ಟಡದಲ್ಲಿ ಇದುವರೆಗೂ ತರಗತಿಗಳು ನಡೆಯುತ್ತಿದ್ದು, ಕಳೆದ 5 ವರ್ಷದಿಂದ ಸರ್ಕಾರಿ ಕಾನೂನು ಕಾಲೇಜಿನ ಸ್ವಂತ ಕಟ್ಟಡದ ಕಾಮಗಾರಿ ನಡೆದು ಮುಕ್ತಾಯಗೊಂಡಿದೆ. ಈ ಕಟ್ಟಡದಲ್ಲಿ ತರಗತಿಗಳನ್ನು ನಡೆಸಲು ಸಾಧ್ಯವಿದ್ದರೂ, ಈಗಿರುವ ಖಾಸಗಿ ಕಟ್ಟಡದಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಈ ಕಟ್ಟಡದಲ್ಲಿ ವಿಶಾಲವಾದ ಕೊಠಡಿಗಳು, ಗ್ರಂಥಾಲಯ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು ಇನ್ನಿತರ ಸಮಸ್ಯೆಗಳಿದೆ ಎಂದು ದೂರಿದರು. ಕೂಡಲೇ ನೂತನ ಕಟ್ಟಡದಲ್ಲಿ ಕಾನೂನು ತರಗತಿಗಳು ಪ್ರಾರಂಭವಾಗಬೇಕು ಹಾಗೂ ಅಗತ್ಯವಿರುವ ಸೌಕರ್ಯ ಒದಗಿಸುವಂತೆ ಪಟ್ಟು ಹಿಡಿದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ಎಂ.ಜಿ.ಪೃಥ್ವಿ, ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ವೇದಿಕೆಯ ಸಂಚಾಲಕ ಎಚ್.ಇ.ಅನ್ಷಾದ್, ಎಚ್.ಯು.ವಚನ್, ಮುಖಂಡ ವಿಜಯೇಂದ್ರ, ಮಹೇಶ್, ಕಲಾ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

