ಕ್ರೀಡಾಪಟುಗಳ ಗೆಲವು, ದೇಶಕ್ಕೆ ಗೌರವ: ಪ್ರೊ. ಲಕ್ಷ್ಮೀನಾರಾಯಣ
ಕನ್ನಡಪ್ರಭ ವಾರ್ತೆ ಹಾಸನ ಸೆ.6
ಕ್ರೀಡಾಪಟು ಮಿಲ್ಕಾಸಿಂಗ್ರಂತೆ ಪ್ರತಿ ಕ್ರೀಡಾಪಟು ಪರಿಶ್ರಮ ಪಟ್ಟರೆ ಸ್ಪರ್ಧೆಗಳಲ್ಲಿ ಗೆಲ್ಲುವುದಷ್ಟೇ ಅಲ್ಲದೇ ದೇಶಕ್ಕೆ ಗೌರವ ತರುವಂತಹ ವ್ಯಕ್ತಿಗಳಾಗುತ್ತಾರೆ ಎಂದು ಪ್ರೊ.ಎಚ್.ವಿ.ಲಕ್ಷ್ಮೀನಾರಾಯಣ್ ತಿಳಿಸಿದರು.
ಹೊಳೆನರಸೀಪುರ ತಾಲೂಕು ಪಡುವಲಹಿಪ್ಪೆಯ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೈಕ್ಷಣಿಕ ಸಾಲಿನ ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ ಕ್ರಾಸ್ಕಂಟ್ರಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡಾಪಟುಗಳು ಕ್ರೀಡೆಯ ಜೊತೆಗೆ ವಿದ್ಯಾಭ್ಯಾಸ ಮತ್ತು ಜ್ಞಾನಕ್ಕೂ ಹೆಚ್ಚಿನ ಆದ್ಯತೆ ನೀಡಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ.ನಾರಾಯಣ ಮಾತನಾಡಿ, ಕ್ರೀಡೆ ಕೇವಲ ಸ್ಪರ್ಧೆಯ ಮೂಲಕ ಗೆಲುವನ್ನು ಮಾತ್ರ ತಂದುಕೊಡದೆ ಇತರರೊಂದಿಗೆ ಆತ್ಮೀಯ ಸಂಬಂಧವನ್ನು, ಮತ್ತು ಪ್ರೀತಿ-ವಿಶ್ವಾಸಗಳನ್ನು ತಂದು ಕೊಡುತ್ತದೆ. ಇಲ್ಲಿ ಗೆದ್ದ ಕ್ರೀಡಾ ಪಟುಗಳು ಮೈಸೂರು ವಿಶ್ವ ವಿದ್ಯಾನಿಯಲವನ್ನು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಿ ರಾಜ್ಯಕ್ಕೆ ಕೀರ್ತಿ ತರಬೇಕೆಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರ ಮಟ್ಟದ ಖೋ-ಖೋ ಕ್ರೀಡಾಪಟು ಸಿ.ಪಿ ಆದರ್ಶರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಡುವಲಹಿಪ್ಪೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮಿರಂಗಸ್ವಾಮಿ ಮತ್ತು ಹೊಳೆನರಸಿಪುರ ತಾಪಂ ಸದಸ್ಯೆ ಪುಷ್ಪಾ ಆಗಮಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶಕ ಡಾ.ಸಿ.ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿ ಕೆ.ವಿ.ಪಾರ್ಥೇಶ್ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಜಿ.ಮುನಿರಾಜು ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಜಿ.ಪಿ.ಯೋಗೇಶ್ ವಂದಿಸಿದರು.
ಮಹಿಳೆಯರ ವಿಭಾಗದ ಮೊದಲ ಸ್ಥಾನವನ್ನು ಟೆರೆಷಿಯನ್ ಕಾಲೇಜು, ಮೈಸೂರಿನ ಶ್ರದ್ಧಾರಾಣಿ ಎಸ್.ದೇಸಾಯಿ ಮತ್ತು ಎರಡನೇ ಸ್ಥಾನವನ್ನು ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು, ಮೈಸೂರಿನ ಮೇಘನಾ.ಕೆ.ಆರ್ ಪಡೆದರೆ, ಪುರುಷರ ವಿಭಾಗದ ಮೊದಲ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಾರತಿನಗರ, ಮಂಡ್ಯದ ನಂಜುಂಡೇಗೌಡ.ಎ.ಎಸ್. ಹಾಗೂ ದ್ವಿತೀಯ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ.ಆರ್.ಪೇಟೆಯ ಸುನಿಲ್ಕುಮಾರ್ ಎಚ್.ಆರ್. ಪಡೆದರು.
ಮಹಿಳೆಯರ ವಿಭಾಗದ ಸಮಗ್ರ ಪ್ರಶಸ್ತಿಯು ಟೆರೆಷಿಯನ್ ಕಾಲೇಜು, ಮೈಸೂರಿನ ಪಾಲಾದರೇ ಪುರುಷರ ವಿಭಾಗದ ಸಮಗ್ರ ಪ್ರಶಸ್ತಿಯು ಪಿ.ಜಿ.ಸ್ಪೋಟ್ ಕೌನ್ಸಿಲ್ ಮಾನಸ ಗಂಗೋತ್ರಿ, ಮೈಸೂರಿನ ಪಾಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

