ಜೆಡಿಎಸ್ನ ಶ್ರೀವಿದ್ಯಾ ನೂತನ ಅಧ್ಯಕ್ಷೆ
ಕನ್ನಡಪ್ರಭ ವಾರ್ತೆ ಹಾಸನ ಸೆ. 6
ನಗರಸಭೆಯ ನೂತನ ಅಧ್ಯಕ್ಷೆಯಾಗಿ ಜೆಡಿಎಸ್ನ ಶ್ರೀವಿದ್ಯಾ ಹಾಗೂ ಉಪಾಧ್ಯಕ್ಷರಾಗಿ ಇರ್ಷಾದ್ಪಾಷಾ ಶುಕ್ರವಾರ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಎಸ್ಸಿ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.
ಆದರಂತೆ ಅಧ್ಯಕ್ಷೆ ಸ್ಥಾನಕ್ಕೆ ಶ್ರೀವಿದ್ಯಾ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಶ್ರೀವಿದ್ಯಾ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯವಾಗಿದ್ದು, ಇರ್ಷಾದ್ಪಾಷಾ ಹಾಗೂ ಕಾಂಗ್ರೆಸ್ನ ಆರೀಫ್ಖಾನ್ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಚುನಾವಣೆ ನಡೆಸಲಾಯಿತು.
ಬೆಳಗ್ಗೆ 9ರಿಂದ 11ರವರೆಗೆ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ 1ರಿಂದ 1.05 ರವರೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಜಗದೀಶ್ ಪರಿಶೀಲಿಸಿ ನಾಮಪತ್ರಗಳು ಸಿಂಧು ಎಂದು ಪ್ರಕಟಿಸಿದರು. ನಂತರ 1.05 ರಿಂದ 1.15ವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನಿಂದ ಶ್ರೀವಿದ್ಯಾ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಆದ ಕಾರಣ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು. ನಂತರ ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳು ಚುನಾವಣೆ ನಡೆಸಿದರು. ಜೆಡಿಎಸ್ ಅಭ್ಯರ್ಥಿ ಇರ್ಷಾದ್ಪಾಶಾ ಅವರಿಗೆ ಬೆಂಬಲ ಸೂಚಿಸುವವರು ಕೈ ಎತ್ತುವಂತೆ ಸೂಚಿಸಿದರು. ಅದರಂತೆ ಶಾಸಕ ಎಚ್.ಎಸ್.ಪ್ರಕಾಶ್ ಸೇರಿದಂತೆ ಜೆಡಿಎಸ್ನ 24 ಸದಸ್ಯರು ಇರ್ಷಾದ್ಪಾಶಾ ಅವರನ್ನು ಬೆಂಬಲಿಸಿದರು. ನಂತರ ಆರೀಫ್ಖಾನ್ಗೆ 12 ಸದಸ್ಯರು ಬೆಂಬಲ ಸೂಚಿಸಿದರು. ಅತೀ ಹೆಚ್ಚು ಬೆಂಬಲ ಪಡೆದ ಇರ್ಷಾದ್ಪಾಷಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಗದೀಶ್ ಘೋಷಿಸಿದರು. ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ, ಅಧಿಕಾರವಹಿಸಿ ಕೊಳ್ಳುವಂತೆ ಸೂಚನೆ ನೀಡಿದರು.
ಅನಿರೀಕ್ಷಿತ ಬೆಳವಣಿಗೆಯಲ್ಲಿ 12 ನೇ ವಾರ್ಡ್ನಿಂದ ಜೆಡಿಎಸ್ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ಪ್ರಸನ್ನಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದರು.
ಪಟಾಕಿ ಸಿಡಿಸಿ ಸಂಭ್ರಮ: ಅಧ್ಯಕ್ಷೆಯಾಗಿ ಶ್ರೀವಿದ್ಯಾ ಮತ್ತು ಉಪಾಧ್ಯಕ್ಷರಾಗಿ ಇರ್ಷಾದ್ ಆಯ್ಕೆ ಘೋಷಿಸುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಂತರ ನೂತನ ಅಧ್ಯಕ್ಷೆ, ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರ ಬೆಂಬಲದಿಂದ ತಾವು ಆಯ್ಕೆಯಾಗಿದ್ದು, ಎಲ್ಲ ಸದಸ್ಯರ ಬೆಂಬಲ ಪಡೆದು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ. ಮೊದಲು ನಗರದ ಸ್ವಚ್ಚತೆ, ಕುಡಿಯುವ ನೀರು ಹಾಗೂ ಇತರೆ ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಾಮುಖ್ಯತೆ ನೀಡುವೆ
ಟಿ ಶ್ರೀವಿದ್ಯಾ, ನೂತನ ಅಧ್ಯಕ್ಷೆ
ಟಿ ಇರ್ಷಾದ್ಪಾಷಾ, ನೂತನ ಉಪಾಧ್ಯಕ್ಷ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

