ಹಾಸನ

ಜೆಡಿಎಸ್ನ ಮಂಜಣ್ಣ ಪುರಸಭೆ ಅಧ್ಯಕ್ಷ

Published On :

ಕ.ಪ್ರ. ವಾರ್ತೆ೤ ಚನ್ನರಾಯಪಟ್ಟಣ೤ ಸೆ.6
ಪಟ್ಟಣದ ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ನ  ಮಂಜಣ್ಣ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷೆಯಾಗಿ ಗೀತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪುರಸಭಾ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಹಿಂದುಳಿದ ವರ್ಗ(ಅ)ಕ್ಕೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನ ಮಂಜಣ್ಣ, ನಟರಾಜು, ಕಲ್ಪನಾ, ಅನ್ಸರ್ಬೇಗ್ ಹಾಗೂ ನಾಗರಾಜು ನಾಮಪತ್ರ ಸಲ್ಲಿಸಿ ನಂತರದಲ್ಲಿ ಮಂಜಣ್ಣ ಹೊರತುಪಡಿಸಿ ಉಳಿದವರೆಲ್ಲಾ ತಮ್ಮ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಮಂಜಣ್ಣ ಅವಿರೋಧವಾಗಿ ಆಯ್ಕೆಯಾದರು.
ಸಾಮಾನ್ಯ ಮಹಿಳಾ ಸ್ಥಾನಕ್ಕೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶೋಭಾ ಲೋಕೇಶ್, ಮಂಜುಳಾ ಹಾಗೂ  ಗೀತಾ ದಿನೇಶ್ ನಾಮಪತ್ರ ಸಲ್ಲಿಸಿ ನಂತರದಲ್ಲಿ ಶೋಭಾ ಹಾಗೂ ಮಂಜುಳಾ ವಾಪಸ್ ಪಡೆದ ಹಿನ್ನೆಲೆಯಲ್ಲಿ  ಗೀತಾ ಅವರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ನಟರಾಜ್ ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಮಂಜಣ್ಣ ಮಾತನಾಡಿ ಪಟ್ಟಣದ 23 ವಾರ್ಡ್ಗಳ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ತನ್ನದಾಗಿದ್ದು, ಪಟ್ಟಣವನ್ನು ಸ್ವಚ್ಛವಾಗಿಡಲು ಆದ್ಯತೆ ನೀಡುವುದಾಗಿ ತಿಳಿಸಿದರು. ಹಾಗೂ ಪುರಸಭೆಯ ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸಲು ಶಾಸಕರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂತಲೂ ಹೇಳಿದರು.
ಶಾಸಕ ಸಿ.ಎನ್.ಬಾಲಕೃಷ್ಣ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಪಟ್ಟಣದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಕೇಂದ್ರ ಸರ್ಕಾರದ ಸಹಯೋಗದಲ್ಲಿ 22 ಕೋಟಿ ರು. ವೆಚ್ಚದಲ್ಲಿ ಚರಂಡಿ ನಿರ್ಮಾಣ, ಶುದ್ಧ ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು. ಮುಖ್ಯಾಧಿಕಾರಿ ಚಂದ್ರಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.