ಹಾಸನ

ದುದ್ದ ಮಾರ್ಗವಾಗಿ ಸಂಚರಿಸದ ಬಸ್: ವಿದ್ಯಾರ್ಥಿಗಳು ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಸೆ. 6
ದುದ್ದ ಮಾರ್ಗವಾಗಿ ರಾಜ್ಯ ರಸ್ತೆ ಸಾರಿಗೆ ಬಸ್ಗಳು ಸಂಚರಿಸದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಹಾಸನದಿಂದ ತಿಪಟೂರು ರಸ್ತೆ ದುರಸ್ಥಿಯಲ್ಲಿ ಇರುವುದರಿಂದ ಈ ಮಾರ್ಗವಾಗಿ ಯಾವುದೇ ಸಾರಿಗೆ ಬಸ್ಗಳು ಸಂಚರಿಸುತ್ತಿಲ್ಲ. ಇದರಿಂದ ಈ ಭಾಗದ ದೊಡ್ಡಪುರ, ದುದ್ದ, ಹೆರಗು ಸೇರಿದಂತೆ ಇತರೆ ಗ್ರಾಮಗಳ ವಿದ್ಯಾರ್ಥಿಗಳಿಗೆ ತೀರಾ ತೊಂದರೆ ಉಂಟಾಗಿದೆ.
 ಹಲವು ವರ್ಷಗಳಿಂದ ಈ ರಸ್ತೆ ಹಾಳಾಗಿರುವುದರಿಂದ ಕಳೆದ ಒಂದು ವಾರದಿಂದ ಬಸ್ಗಳು ಈ ಮಾರ್ಗದಲ್ಲಿ ಸಂಚರಿಸದ ಕಾರಣ ತೀರ ತೊಂದರೆ ಉಂಟಾಗಿದೆ ಎಂದು ಆರೋಪಿಸಿದರು. ಸಾರಿಗೆ ಬಸ್ಗಳು ನಗರದ ಹೈಟೆಕ್ ಬಸ್ ನಿಲ್ದಾಣದಿಂದ ಹೊರಟು ಡೈರಿ ಮಾರ್ಗವಾಗಿ ಶಾಂತಿಗ್ರಾಮದ ಮೇಲೆ ಸಂಚರಿಸುತ್ತಿವೆ. ಇದರಿಂದ ದೊಡ್ಡಪುರ, ದುದ್ದ, ಹೆರಗು ಸೇರಿದಂತೆ ಇತರೆ ಗ್ರಾಮಗಳ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.
 ಈ ಬಗ್ಗೆ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಈ ಮಾರ್ಗವಾಗಿ ಸಾರಿಗೆ ಬಸ್ಗಳು ಸಂಚರಿಸುವಂತೆ ಮನವಿ ಮಾಡಿದರು. ವಿದ್ಯಾರ್ಥಿಗಳಾದ ಎಚ್.ಎಲ್.ದೀಪು, ಎನ್.ಆರ್.ಕುಮಾರ್, ಹರ್ಷ, ಎಂ.ಡಿ.ಸಂಜು, ಸುಹಾಸ್, ಹೇಮಂತ್, ಅಶ್ವಿನಿ, ಪೂಜಾ, ಚಂದನ, ಶಿಲ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.