ಹಾಸನ

'ಹಾಸನ-ದುದ್ದ ರಸ್ತೆ ಕಾಮಗಾರಿ ಶೀಘ್ರ ಆರಂಭ'

Published On :

ಹಾಸನ: ಹಾಸನ- ದುದ್ದ- ಚಿಕ್ಕನಾಯಕನಹಳ್ಳಿ ರಸ್ತೆ ಕಾಮಗಾರಿ ಇನ್ನೂ ಮೂರು ತಿಂಗಳಲ್ಲಿ ಆರಂಭವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಡಾ.ಎಚ್.ಸಿ. ಮಹಾದೇವಪ್ಪ ತಿಳಿಸಿದ್ದಾರೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆ ಆಗಿರುವ ಈ ರಸ್ತೆ ಕಾಮಗಾರಿ ಕೂಡಲೇ ಆರಂಭಿಸಬೇಕೆಂದು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅದಕ್ಕೆ ಗುತ್ತಿಗೆದಾರರು ಒಪ್ಪಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  ಹಾಸನ- ಬೇಲೂರು ಹೊರ ವರ್ತುಲ ರಸ್ತೆ ಸಂಪರ್ಕಿಸಲು ಉಂಟಾಗಿರುವ ಸಮಸ್ಯೆ ನಿವಾರಿಸಲಾಗುತ್ತಿದ್ದು,  ಮಳೆಗಾಲ ಮುಗಿದ ನಂತರ ಜಿಲ್ಲಾದ್ಯಂತ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು. ಹಾಸನದ ಎನ್. ಆರ್. ವೃತ್ತದಿಂದ ರೇಲ್ವೆ ಮೇಲ್ಸುತುವೆ ನಿರ್ಮಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಮೀನುಗಾರರ ರಕ್ಷಣೆ: ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯುವ ಗುತ್ತಿಗೆ ಪಡೆಯುವ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳು ಕೈವಾಡ ಇದೆ. ಅದನ್ನು ತಪ್ಪಿಸಿ ಅರ್ಹರಿಗೆ ಮೀನುಗಾರಿಗೆ ನಡೆಸುವ ಬಗ್ಗೆ ಕ್ರಮ ತೆಗೆದು ಕೊಳ್ಳಲಾಗುವುದು ಮತ್ತು ಮರಳು ಸಾಗಾಣಿಕೆ ಬಗ್ಗೆ ಸೂಕ್ತ ನೀತಿ ನಿರೂಪಿಸಲಾಗುವುದು.
  ಒಟ್ಟಾರೆ ಜಿಲ್ಲೆಯ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಲು ಸೆಪ್ಟೆಂಬರ್ 11 ರಂದು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಸಚಿವರು ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾಂ, ಉಪಾಧ್ಯಕ್ಷ ಬನವಾಸೆ ನಾರಾಯಣಗೌಡ, ಎಚ್.ಕೆ.ಜವರೇಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.