ಹಾಸನ

ಎಪಿಎಂಸಿ ಮುಂಭಾಗ ರೈತರ ಪ್ರತಿಭಟನೆ

Published On :

ಕ.ಪ್ರ.  ವಾರ್ತೆ೤ ಅರಸೀಕೆರೆ೤ ಸೆ. 7
ನಾಫೆಡ್ ಕೊಬ್ಬರಿ ಖರೀದಿ ಕೇಂದ್ರ ಸೆ.16 ರಿಂದ ಸ್ಥಗಿತಗೊಳ್ಳಲಿದೆ ಎಂಬ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಹಾಗೂ ಶಾಶ್ವತವಾಗಿ ನಾಫೆಡ್ ಖರೀದಿ ಕೇಂದ್ರ ತೆರೆಯಬೇಕೆಂದು ಆಗ್ರಹಿಸಿ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಎಪಿಎಂಸಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿ ಈ ಸಂಬಂಧ ಅಧ್ಯಕ್ಷ ಮುರುಂಡಿ ಶಿವಯ್ಯಗೆ ಮನವಿ ಸಲ್ಲಿಸಿದರು.
ತೀವ್ರ ಬರಗಾಲ ಹಾಗೂ ತೆಂಗಿಗೆ ತಗುಲಿದ ರೋಗದಿಂದ ಸುಳಿಬಿದ್ದು ತೆಂಗು ನಾಶವಾಗಿ ಬೆಳೆಗಾರರು ಆರ್ಥಿಕ ದುಸ್ಥಿತಿಗೆ ತಲುಪಿರುವ ಈ ಸಂದರ್ಭದಲ್ಲಿ ಸರ್ಕಾರ ನಾಫೆಡ್ ಖರೀದಿ ಕೇಂದ್ರವನ್ನು ಸ್ಥಗಿತಗೊಳಿಸುವ ನಿರ್ಧಾರ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸತತ ಬರಗಾಲ ಹಾಗೂ ಬೆಲೆ ಕುಸಿತದಿಂದ ಕಂಗಾಲಾಗಿರುವ ತೆಂಗು ಬೆಳೆಗಾರನ ನೆರವಿಗೆ ನಿಲ್ಲಬೇಕಾದ ಸರ್ಕಾರ ಈ ರೀತಿ ನಿರ್ಧಾರ ಪ್ರಕಟಿಸುತ್ತಿರುವುದು ಸರಿಯಲ್ಲ.   ರೈತರ ಬದುಕಿನೊಂದಿಗೆ ಚೆಲ್ಲಾಟವಾಡುವ ನಿರ್ಧಾರದಿಂದ ಹಿಂದೆ ಸರಿಯಬೇಕು. ನೈಜವಾಗಿ ಸಂಕಷ್ಟದಲ್ಲಿರುವ ರೈತನ ನೆರವಿಗೆ ಧಾವಿಸಲು ಆದೇಶ ನೀಡಬೇಕೆಂದು ಒತ್ತಾಯಿಸಿದ ಅವರು ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ಅಧ್ಯಕ್ಷ ಮುರುಂಡಿ ಶಿವಯ್ಯ ಮಾತನಾಡಿ, ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಆದ್ದರಿಂದ ತೆಂಗು ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಗೊಳ್ಳಬಾರದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.