ಜಾವಗಲ್ ಠಾಣೆಯಲ್ಲಿ ಶಾಂತಿ ಸಭೆ
ಜಾವಗಲ್: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ಕರೆಯಲಾಗಿತ್ತು. ಅರಸೀಕೆರೆ ಗ್ರಾಮಾಂತರ ಸಿಪಿಐ ಆರ್.ವಿ. ಗಂಗಾಧರಪ್ಪ ಮಾತನಾಡಿ, ಶಾಂತಿಯುತವಾಗಿ ಕಾರ್ಯಕ್ರಮ ಹಾಗೂ ವಿಸರ್ಜನಾ ಮಹೋತ್ಸವ ನಡೆಸುವಂತೆ ತಿಳಿಸಿದರು.
ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪೆಂಡಾಲ್ ನಿರ್ಮಿಸಬೇಕು. ಬಲವಂತವಾಗಿ ಚಂದಾ ವಸೂಲಿ ಹಾಗೂ ಅಕ್ರಮ ಮದ್ಯ ಮಾರಾಟ ಮಾಡದಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ್ಯಗಳಿಗೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಸಮಿತಿಯವರು ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು. ಗೌರಿ-ಗಣೇಶ ಹಬ್ಬದ ಬಂದೋಬಸ್ತಿಗೆ ಬದಲಾಗಿ ಹಬ್ಬಕ್ಕೆ ಪೊಲೀಸರನ್ನು ಕರೆಯುವಂತಹ ಸನ್ನಿವೇಶ ನಿರ್ಮಾಣ ಮಾಡಬೇಕೆಂದರು. ಜಾವಗಲ್ ಗಣಪತಿ ಸೇವಾ ಸಮಿತಿ ಅಧ್ಯಕ್ಷ, ತಾಪಂ ಸದಸ್ಯ ಜೆ.ಕೆ.ಸಿದ್ದೇಗೌಡ, ಜಿ.ಎಂ.ಚಂದ್ರಶೇಖರ್, ಜೆ.ಜಿ.ಧರ್ಮೇಂದ್ರ, ಜೆ.ಟಿ.ಮಂಜುನಾಥ್ಶೆಟ್ಟಿ ಮೊಸಳೆ ಈಶಶಣ್ಣ, ಕರಗುಂದ ಪರಮೇಶ್ವರಪ್ಪ, ಮಾಜಿ ಅಧ್ಯಕ್ಷ ಶಿವಣ್ಣ, ಮಹಾಲಿಂಗಪ್ಪ, ಮೇಲಿನ ಹೊಸಳ್ಳಿ ಕುಬೇರ, ಅರಕೆರೆ ಶಶಿ, ಬಂದೂರು ಗಣೇಶ, ಕಲ್ಯಾಡಿ ವಿರೂಪಾಕ್ಷಪ್ಪ, ಗ್ರಾಮಸ್ಥರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

