ಹಾಸನ

ಜಿಲ್ಲಾ ತರಬೇತಿ ಕಾರ್ಯಾಗಾರ ಚಾಲನೆ

Published On :

ಹಾಸನ: ಹದಿಹರೆಯದ ಹೆಣ್ಣು ಮಕ್ಕಳು ಕಾಣೆಯಾಗುತ್ತಿರುವ ಬಗ್ಗೆ ದಿನನಿತ್ಯ ಪತ್ರಿಕೆಗಳಲ್ಲಿ ಬರುತ್ತಿಯೆ ಹೊರತು ಕಾವಲು ಸಮಿತಿಯಿಂದ ವರದಿ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮೂರು ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ಎಚ್.ಸಿ.ಚಿದಾನಂದ್ ಮೇಲ್ವಿಚಾರಕರಿಗೆ ಸಲಹೆ ನೀಡಿದರು.
 ನಗರದ ಬಾಲಕರ  ಬಾಲಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಬಾಲ ಕಾಯ್ದೆ ಮತ್ತು ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಅನುಷ್ಠಾನ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿಯರಿಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ  ಮಾತನಾಡಿದರು.
 ಬಾಲ್ಯ ವಿವಾಹ ಇಂದಿಗೂ ಜೀವಂತವಾಗಿದೆ. ಶಿಶು ಮರಣಕ್ಕೆ ಬಾಲ್ಯ ವಿವಾಹ ಕೂಡ ಒಂದು ಕಾರಣ ಎಂಬುದು ಕಂಡುಬಂದಿದೆ ಎಂದರು. ರಾಜ್ಯದಲ್ಲಿ ಅಪೌಷ್ಠಿಕ ಮಕ್ಕಳನ್ನು ಹೊಂದಿರುವ ಜಿಲ್ಲೆಗಳಲ್ಲಿ ಕಡಿಮೆ ಅಪೌಷ್ಠಿಕ ಮಕ್ಕಳನ್ನು ಹೊಂದುವ ಮೂಲಕ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿದೆ.ಮೇಲ್ವಿಚಾರಕಿಯರು ಅತ್ಯುತ್ತಮವಾಗಿ ಕೆಲಸ ಮಾಡಿರುವುದರಿಂದ ಜಿಲ್ಲೆ ಮೊದಲ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ಮೇಲ್ವಿಚಾರಕಿಯರಿಗೆ ಅಭಿನಂದನೆ ಸಲ್ಲಿಸಿದರು.
 ಜಿಲ್ಲಾ ಸಮಗ್ರ  ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ  ವಿ.ಗೀತಾ  ಮಾತನಾಡಿ, ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ರೂಪರೇಷೆ ತಿಳಿದುಕೊಂಡು ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವ ಜತೆಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದರು.
  ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಸಿ.ದೇವರಾಜೇಗೌಡ  ಮಾತನಾಡಿ,  ವರ್ಷದಿಂದ ವರ್ಷಕ್ಕೆ ಹೊಸ ಕಾನೂನುಗಳು ಜಾರಿಗೆ ಬಂದಿದ್ದರೂ  ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಮೇಲ್ವಿಚಾರಕಿಯರು ಬಾಲ ಕಾಯ್ದೆ ಬಗ್ಗೆ ಹೆಚ್ಚಿನ ಜ್ಞಾನ ಹೊಂದುವುದರ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗುವಂತೆ ತಿಳಿಸಿದರು. ಅಧೀಕ್ಷಕಿ ಪ್ರಿಯಾ ಮಾತನಾಡಿದರು. ಶಿವಣ್ಣ ಸ್ವಾಗತಿಸಿದರು.ಸಂತೋಷ್ ವಂದಿಸಿದರು.
ಅವಿರೋಧ ಆಯ್ಕೆ
ಜಾವಗಲ್: ಸಮೀಪದ ನೇರ್ಲಿಗೆ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಚಿಂತಾಮಣಿ, ಉಪಾಧ್ಯಕ್ಷೆಯಾಗಿ ನೀಲಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಸುಜಾತ, ಬಿ.ಗಂಗಮ್ಮ, ಶಿವಮ್ಮ, ಟಿ.ಕೆ.ಗಂಗಮ್ಮ, ತಿಮ್ಮಮ್ಮ, ರೇಣುಕಮ್ಮ, ಗಂಗಮ್ಮ, ಹಾಲಮ್ಮ ಇಂದ್ರಮ್ಮ  ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಟಿ.ಪಿ. ಮಂಜುಳ ಕಾರ್ಯನಿರ್ವಹಿಸಿದರು. ಕಾರ್ಯದರ್ಶಿ ಎಚ್.ಎನ್. ಸುಮಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.