ಪದವಿ ಕಾಲೇಜಲ್ಲಿ ಶಿಕ್ಷಕರ ದಿನಾಚರಣೆ
ಜಾವಗಲ್: ಶಿಕ್ಷಕರನ್ನು ಗುರುತಿಸುವ ಕೆಲಸ ಸಮಾಜದ್ದು ಎಂದು ಜಾವಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ವಸಂತರಾಜ್ ಅರಸ್ ಹೇಳಿದರು.
ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು, ಶಿಕ್ಷಕರು ಪ್ರಸ್ತುತ ಸನ್ನಿವೇಶದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.
ಶಿಕ್ಷಕ ಸಮಾಜದ ಮುಂದಿನ ಪೀಳಿಗೆಯನ್ನು ತಯಾರಿಮಾಡುವ ಗುರುತರ ಜವಾಬ್ದಾರಿ ಹೊಂದಿದ್ದು ಆದರ್ಶ ಪೌರ ಮತ್ತು ದೇಶ ರಕ್ಷಕರನ್ನಾಗಿ ಮಾಡಬೇಕೆಂದರು. ಉತ್ತಮ ಶಿಕ್ಷಕರು, ತತ್ವಜ್ಞಾನಿಯಾಗಿದ್ದ ರಾಧಾಕೃಷ್ಣನ್ ದೇಶದ ಅಭ್ಯುದಯಕ್ಕಾಗಿ ಶ್ರಮಿಸಿದ ಮಹಾನ್ ಚೇತನವಾಗಿದ್ದರು. ವಿದ್ಯಾರ್ಥಿಗಳು ಅವರ ಆದರ್ಶ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕೆಂದರು.
ಉಪನ್ಯಾಸಕ ಮಂಜುನಾಥ್ ಮಾತನಾಡಿದರು. ಹಿರಿಯ ಉಪನ್ಯಾಸಕ ಎನ್. ಉದಯಕುಮಾರ್, ನಾಗರಾಜ್, ಶಿವಲಿಂಗಯ್ಯ ಹಾಗೂ ಇತರೆ ಉಪನ್ಯಾಸಕರು ಇದ್ದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕರಿಗೆ ನೆನಪಿನ ಕಾಣಿಕೆ ನೀಡಲಾಯಿತು. ಮಾಡೆಲ್ ಶಾಲೆಯಲ್ಲಿ
ಶಿಕ್ಷಕರ ದಿನಾಚರಣೆ ಆಚರಿಸಿ ಶಿಕ್ಷಕರಿಗೆ ನಾನಾ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ವಿನಾಯಕ್ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

