ಬಾರದ ಬಸ್, ವಿದ್ಯಾರ್ಥಿಗಳ ಪ್ರತಿಭಟನೆ
ಹಾಸನ: ಪಟ್ಟಣದಿಂದ ಹಾಸನ ಮತ್ತು ತಿಪಟೂರು ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅವಶ್ಯ ಬಸ್ ವ್ಯವಸ್ಥೆ ಮಾಡದ ಸಂಸ್ಥೆ ಅಧಿಕಾರಿಗಳ ವರ್ತನೆ ಖಂಡಿಸಿ ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಸಾರಿಗೆ ಬಸ್ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ 7 ರಿಂದ 9 ಗಂಟೆಯಾದರೂ ತಿಪಟೂರು ಮಾರ್ಗದಲ್ಲಿ ಹೋಗಬೇಕಾದ ಅನೇಕ ಬಸ್ಗಳು ನಿಲ್ದಾಣಕ್ಕೆ ಬಾರದಿದ್ದ ಕಾರಣ ತಿಪಟೂರಿನ ನಾನಾ ಕಾಲೇಜಿಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಗುಂಪು ಸೇರಿ ಸ್ಥಳೀಯ ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿನಿತ್ಯ ತಾಲೂಕಿನ ನಾನಾ ಗ್ರಾಮಗಳಿಂದ ಹಾಸನ ಮತ್ತು ತಿಪಟೂರು ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬಸ್ ಪಾಸ್ ಪಡೆದು ಸಂಚರಿಸುತ್ತಿರುವ ಕಾರಣ ಪ್ರತಿನಿತ್ಯ ಓಡಾಡುವ ಬಸ್ಗಳಿಗೆ ಹೆಚ್ಚಿನ ಹಣ ಸಂಗ್ರಹಣೆ ಆಗುವುದಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕರು ಮತ್ತು ನಿರ್ವಾಹಕರು ವಿದ್ಯಾರ್ಥಿಗಳನ್ನು ಎಕ್ಸ್ಪ್ರೆಸ್ ಬಸ್ಗಳಲ್ಲಿ ಹತ್ತಿಸಿಕೊಳ್ಳದೆ ಬೇರೆ ಬಸ್ಗಳಲ್ಲಿ ಬರುವಂತೆ ಬಿಟ್ಟು ಹೋಗುವುದು. ಅಲ್ಲದೆ ಕಾಲೇಜಿನ ಸಮಯದಲ್ಲಿ ಬಸ್ಗಳನ್ನು ನಿಲ್ದಾಣಕ್ಕೆ ತಾರದೆ ಹೋಗುವುದು ಸಾಮಾನ್ಯ ಸಂಗತಿಯಾಗಿದೆ. ಅನೇಕ ಎಕ್ಸ್ಪ್ರೆಸ್ ಬಸ್ಗಳು ಬೇಕೆಂದೆ ಈ ಸಮಯದಲ್ಲಿ ನಿಧಾನವಾಗಿ ಬರುತ್ತವೆ. ಇದರಿಂದ ಪ್ರತಿನಿತ್ಯ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತೆದೆ ಎಂದು ವಿದ್ಯಾರ್ಥಿಗಳು ದೂರಿದರು. ಅಲ್ಲದೇ ಈ ಬಗ್ಗೆ ಸಂಸ್ಥೆಯ ಸ್ಥಳೀಯ ಅಧಿಕಾರಿಗಳು ಮತ್ತು ಉನ್ನತ ಅಧಿಕಾರಿಗಳಿಗೆ ಈ ಬಗ್ಗೆ ಅನೇಕ ಬಾರಿ ಲಿಖಿತ ಮನವಿ ಸಲ್ಲಿಸಲಾಗಿದೆ. ಆದರೆ, ಇದುವರೆಗೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಸ್ಥಳಕ್ಕೆ ಆಗಮಿಸಿದ ನಗರಠಾಣೆ ಎಸ್ಐ ಲೋಕೇಶ್ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ತಕ್ಷಣವೇ ಹಲವು ಬಸ್ಗಳ ವ್ಯವಸ್ಥೆ ಮಾಡಿದ ಹಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ತಿಪಟೂರು ಮತ್ತು ಹಾಸನದ ಬಸ್ ಮೂಲಕ ತಂತಮ್ಮ ಕಾಲೇಜುಗಳಿಗೆ ತೆರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

