ಹಾಸನ

ವಿಲ್ಲುಪುರಂ - ಮಂಗಳೂರು ಹೆದ್ದಾರಿ ಕಾಮಗಾರಿ ವಿಳಂಬ: ಜನಾಕ್ರೋಶ

Published On :

ಕನ್ನಡಪ್ರಭ ವಾರ್ತೆ೤ ಬೇಲೂರು೤ ಸೆ. 7
ವಿಲ್ಲುಪುರಂ ಮತ್ತು  ಮಂಗಳೂರು ರಾಷ್ಟ್ರೀಯ ಹೆದ್ಧಾರಿ 234 ರ ಬಾಣವಾರ ಮತ್ತು ಬೇಲೂರು ಮಾರ್ಗದ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಇದರಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಕಾಮಗಾರಿ ತ್ವರಿತಗತಿಯಲ್ಲಿ ಮಾಡಬೇಕು ಇಲ್ಲವಾದರೆ ಬೇಲೂರು ಮತ್ತು ಬಾಣವಾರ ಮಾರ್ಗದಲ್ಲಿ ರಸ್ತೆ ತಡೆ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸಾರ್ವಜನಿಕರು ತಮ್ಮ ಎಚ್ಚರಿಕೆ ನೀಡಿದ್ದಾರೆ.
 ಸದ್ಯ ಬಾಣವಾರ ಮೂಲಕ ಕೆಲಸ ಆರಂಭವಾಗಿದ್ದು, ಜಾವಗಲ್, ಹಳೇಬೀಡು ಹಾಗೂ ಹೆಬ್ಬಾಳು ಗ್ರಾಮದ ತನಕ ರಸ್ತೆ ಮಧ್ಯೆ ಬರುವ ಸೇತುವೆಗಳ ನಿರ್ಮಾಣ ಕಾರ್ಯ ಬಹಳ ಮಂದಗತಿಯಲ್ಲಿ ಇದ್ದು, ಹೆಬ್ಬಾಳು ಕೆರೆಗೆ ಅಡ್ಡವಾಗಿ ನಿರ್ಮಾಣವಾಗುತ್ತಿರುವ ಸೇತುವೆ ಕಳೆದ ಮೂರು ತಿಂಗಳಿಂದ ಕೆಲಸ ಸ್ಥಗಿತವಾಗಿದೆ.
 ಇತ್ತೀಚೆಗೆ ಸುರಿದ ಭಾರಿ ಮಳೆಗೆ ಕೆರೆ ತುಂಬಿ, ಸೇತುವೆ ಅಡ್ಡಗಟ್ಟಿದ ಪರಿಣಾಮ ಸರ್ಕಾರಿ ಪ್ರೌಢ ಶಾಲೆಗೆ ಸೊಂಟ ಮಟ್ಟದ ನೀರು ತುಂಬಿ ವಿದ್ಯಾರ್ಥಿಗಳು ಹೋರ ಬರಲು ಹರಸಾಹಸ ಮಾಡಬೇಕಿದೆ. ಅಲ್ಲದೆ  ಸೇತುವೆ ನಿರ್ಮಾಣ ನೆಪದಲ್ಲಿ ದೂರವಾಣಿ ಸಂಪರ್ಕಗಳನ್ನು ಜೆಸಿಬಿಯಿಂದ ಕಿತ್ತು ಹಾಕಿದ ಪರಿಣಾಮ ಗ್ರಾಮ ಪಂಚಾಯ್ತಿ ಮತ್ತು ಬ್ಯಾಂಕ್ಗಳ ಕೆಲಸಕ್ಕೆ ತೊಂದರೆಯಾಗಿದೆ. ಒಟ್ಟಾರೆ ರಾಷ್ಟ್ರೀಯ 234 ಹೆದ್ದಾರಿ ಕಾಮಗಾರಿ ಕೆಲಸ ತೀವ್ರಗತಿಯಲ್ಲಿ ನಡೆಯಬೇಕು. ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜಾಣ ಮೌನ ವಹಿಸದೆ ಸಮಸ್ಯೆಗೆ ಸ್ಪಂದಿಸಬೇಕು ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.