ಗಗನಮುಖಿ ಬೆಲೆ ಏರಿಕೆ ನಡುವೆ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ
ಹಾಸನ: ಒಂದೆಡೆ ತುಂತುರು ಮಳೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆಯೇ ಸಂಭ್ರಮದಿಂದ ಗಣೇಶ ಹಬ್ಬ ಆಚರಿಸಲು ಜಿಲ್ಲೆಯ ಜನತೆ ಪೂರ್ವ ಸಿದ್ದತೆಯನ್ನು ಭಾನುವಾರ ನಡೆಸಿದರು.
ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಜನರು ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಮಗ್ನರಾಗಿ ಬೆಲೆಗಳನ್ನು ಲೆಕ್ಕಿಸದೆ ಖರೀಸಿದರು. ಎಲ್ಲಾ ವಸ್ತುಗಳ ಬೆಲೆ ಏರಿಕೆ ಗಗನಮುಖಿ. ಕಳೆದ ವರ್ಷಕ್ಕಿಂತಲೂ ಈ ಬಾರಿ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವ್ಯಾಪಾರ ಮಂದಗತಿಯಲ್ಲಿ ನಡೆಯಿತು. ಹೂವು ಮತ್ತು ಹಣ್ಣಿನ ಬೆಲೆ ಕೊಂಚ ಏರಿಕೆಯಾಗಿದೆ. ಆದರೆ ಜನರು ಇದನ್ನು ಲೆಕ್ಕಿಸದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತರಾಗಿದ್ದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಬೆಳಗೆ ಬೇಗ ಎದ್ದು ಮನೆಯನ್ನೆಲ್ಲ ಸ್ವಚ್ಚಗೊಳಿಸಿ ಬಾಗಿಲಿಗೆ ಮಾವಿನ ತೋರಣ ಕಟ್ಟಿ ಮನೆಯನ್ನು ಸಿಂಗರಿಸಲಾಗುತ್ತದೆ. ಮನೆಗಳಲ್ಲಿ ಗೌರಿ ಗಣೇಶನನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸುತ್ತಾರೆ. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿಯೂ ಹಬ್ಬದ ಸೊಗಡು ದಿನ ದಿನಕ್ಕೆ ಕಡಿಮೆಯಾಗುತ್ತಿದೆ. ಜನರು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ, ದುಡಿಮೆ, ಸಂಪಾದನೆಯಲ್ಲಿ ಲೀನವಾಗಿ ಸಂಪ್ರದಾಯ, ಆಚಾರ-ವಿಚಾರಗಳಿಗೆ ಅಷ್ಟು ಪ್ರಾಮುಖ್ಯತೆ ನೀಡುತ್ತಿಲ್ಲ. ಅಲ್ಲದೆ ಅಗತ್ಯ ವಸ್ತುಗಳ ಬೆಲೆಗಳೂ ಹೆಚ್ಚಾಗುತ್ತಿರುವುದರಿಂದ ಹಬ್ಬದ ಆಚರಣೆಯತ್ತ ಜನರ ಗಮನವೂ ಒಂದು ರೀತಿಯಲ್ಲಿ ಕುಗ್ಗುತ್ತಿದೆ.
ಮಾವಿನ ಎಲೆ ಕಟ್ಟಿಗೆ 10 ರು.: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಳದಿ ಸೇವಂತಿಗೆ, ಬಣ್ಣದ ಸೇವಂತಿಗೆ, ಮಲ್ಲಿಗೆ ಹೂವು, ಕಾಕಡ ಹೂವು, ಕನಕಾಂಬರದ ಬೆಲೆ ಗಗನಕ್ಕೇರಿದೆ. ಮಾವಿನ ಸೊಪ್ಪು ಒಂದು ಕಟ್ಟಿಗೆ 10 ರು. ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

