ಹಾಸನ

ಹೆಜ್ಜೆ ಹೆಜ್ಜೆಗೂ ಗುಂಡಿ, ಹಳ್ಳ ಕೊಳ್ಳದ ರಸ್ತೆ

Published On :

ಹಾರನಹಳ್ಳಿ: ಸುವರ್ಣ ಗ್ರಾಮ, ನಿರ್ಮಲ ಗ್ರಾಮ, ಸ್ವಚ್ಚ ಗ್ರಾಮ ಹೀಗೆ ಸರ್ಕಾರ ನಾನಾ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ರಸ್ತೆ, ಇತ್ಯಾದಿ ಅಭಿವೃದ್ಧಿಗೆ ಕೋಟ್ಯಂತರ ರು. ಅನುದಾನ ಬಿಡುಗಡೆ ಮಾಡುತ್ತಿದ್ದರೂ ಕೆಲವು ಗ್ರಾಮಗಳಲ್ಲಿನ ರಸ್ತೆಗಳು ಗುಂಡಿ ಗೊಟರುಗಳು ದುರಸ್ತಿಯಾಗದೇ, ಆ ರಸ್ತೆಯಲ್ಲಿ ಓಡಾಡುವುದೆ ಕಷ್ಟಕರವಾಗಿದೆ.
ಮುರುಂಡಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ಹಾಗೂ ತಾಲೂಕು ಆಡಳಿತದ ಬೇಜವಾಬ್ದಾರಿಯಿಂದಾಗಿ ಸಂಕೋಡನಹಳ್ಳಿಯಿಂದ ಯಾದಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಮಳೆ ನೀರಿನಿಂದ ಆವೃತ್ತವಾಗಿದ್ದು  ಪ್ರಯಾಣಿಕರು, ಸಾರ್ವಜನಿಕರು ಈ ಮಾರ್ಗ ಸಂಚರಿಸಲಾರದೆ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸ ತೊಡಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ರಸ್ತೆಯಲ್ಲಿ ನೀರಿನ ಹೊಂಡವಾಗಿದ್ದು ಪಾದಚಾರಿಗಳು, ವಾಹನ ಸವಾರರು ಓಡಾಡಲಾರದ ಪರಿಸ್ಥಿತಿ ಉಂಟಾಗಿದೆ. ಐದಾರು ತಿಂಗಳುಗಳಿಂದಲೂ  ಪರಿಸ್ಥಿತಿ ಹೀಗಿದ್ದರೂ ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯತಿ ಅಸಡ್ಡೆ ವಹಿಸಿದೆ ಎಂಬ ಆರೋಪ ಕೇಳಿಬರುತ್ತಿದೆ.
ಯಾದಾಪುರ ಜೇನುಕಲ್ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ಯಾತ್ರಿಕರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವುದರಿಂದ ರಸ್ತೆ ದುರಸ್ತಿಗೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ  ಬಿಳಿಚೌಡಯ್ಯ ಗಮನ ಹರಿಸಿ ರಸ್ತೆ ದುರಸ್ತಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.