ಹಾಸನ

ಭಾರತಕ್ಕಾಗಿ ಓಟ ಕಾರ್ಯಕ್ರಮ ಇಂದು

Published On :

ಹಾಸನ: ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಭಿಯಾನದ ಅಂಗವಾಗಿ ಸೆ.11ರಂದು  ಭಾರತಕ್ಕಾಗಿ ಓಟ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಅಭಿಯಾನದ ಪ್ರಾಂತ ಸಮಿತಿ ಸದಸ್ಯ ಕೆ.ಪಿ.ಎಸ್.ಪ್ರಮೋದ್ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.11 ಸ್ವಾಮಿ ವಿವೇಕಾನಂದರು ಅಮೆರಿಕದ ಚಿಕಾಗೋ ನಗರದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಷಣ ಮಾಡಿದ ದಿನವಾಗಿದೆ. ತನ್ನಿಮಿತ್ತ ದೇಶದ ಯುವಕರಲ್ಲಿ ರಾಷ್ಟ್ರ ಜಾಗೃತಿ ಉಂಟು ಮಾಡಲು  ಭಾರತಕ್ಕಾಗಿ ಓಟ ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.  ಹಾಸನಾಂಬ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10ಕ್ಕೆ ಎಲ್ಲಾ ಕಾಲೇಜಿನ ಯುವಕರನ್ನು ಸೇರಿಸಿ ಅಲ್ಲಿಂದ ಸಾಲಗಾಮೆ ರಸ್ತೆ, ಸರಸ್ವತಿ ವೃತ್ತ, ಕಾಲೇಜು ಪಕ್ಕದ ರಸ್ತೆ, ಆರ್.ಸಿ.ರಸ್ತೆ, ಬಿ.ಎಂ.ರಸ್ತೆ, ಗಾಂಧಿಬಜಾರ್ ವೃತ್ತ, ಸುಭಾಷ್ ಚೌಕ, ಕಸ್ತೂರ ಬಾ ರಸ್ತೆ, ಕಲಾಭವನಕ್ಕೆ ಹಿಂದಿರುಗಲಾಗುವುದು. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದ ಅವರು, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು ಎಂದರು. ಜಿಲ್ಲಾ ಸಂಚಾಲಕ ಹರಿಹರಪುರ ಶ್ರೀಧರ್, ಡಾ.ಜನಾರ್ದನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.