'ವರದಕ್ಷಿಣೆ ದೌರ್ಜನ್ಯ ಕಾಯ್ದೆ ದುರ್ಬಳಕೆ ಹೆಚ್ಚಳ'
ಅರಕಲಗೂಡು: ಸಮಾಜದಲ್ಲಿ ಶೋಷಣೆಗೆ ಒಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಲು ಬಳಕೆಯಾಗಬೇಕಿದ್ದ ವರದಕ್ಷಿಣೆ ದೌರ್ಜನ್ಯ ಕಾಯ್ದೆ ದುರ್ಬಳಕೆ ಪ್ರಮಾಣ ಹೆಚ್ಚುತ್ತಿದೆ ಎಂದು ವಕೀಲ ಹಾಗೂ ಉಪನ್ಯಾಸಕ ಎ. ಮೈಲಾರ ಆತಂಕ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಮೈಲಾರ ಅವರು ರಚಿಸಿದ ವಾಣಿಜ್ಯ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಆಯ್ದ ವಿಷಯಗಳ ಇಂಗ್ಲಿಷ್ ಆವೃತ್ತಿ ಪುಸ್ತಕ ಬಿಡುಗಡೆ ಹಾಗೂ ಪ್ರಥಮ ಬಿಕಾಂ, ಬಿಬಿಎಂ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಅವರು ಮಾತ ನಾಡಿದರು. ಈ ಹಿಂದೆ ವರದಕ್ಷಿಣೆ ಪ್ರಕರಣಗಳು ದಾಖಲಾದರೆ ಕಾನೂನಿನ ಮೂಲಕ ಮಹಿಳೆಗೆ ಪರಿಹಾರ ಸಿಗುತ್ತಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಮಹಿಳೆಯರೆ ಈಗ ಗಂಡನನ್ನು ವರದಕ್ಷಿಣೆ ಕಿರುಕುಳ ದೌರ್ಜನ್ಯಕ್ಕೆ ಗುರಿಪಡಿಸಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥ ಕೆಟ್ಟ ಪ್ರವೃತ್ತಿ ತಡೆಗಟ್ಟುವ ನಿಟ್ಟಿನಲ್ಲಿ ಸಮಗ್ರ ಅಧ್ಯಯನ ನಡೆಸಿ ಪುಸ್ತಕ ರಚಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಬಿಕಾಂ ಮತ್ತು ಬಿಬಿಎಂ ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿ ಮೌಲ್ಯಯುತ ವಿಷಯಗಳನ್ನು ಸಂಗ್ರಹಿಸಿ ಇಂಗ್ಲಿಷ್ ಆವೃತ್ತಿ ಬಿಡುಗಡೆಯಾಗಿದ್ದು ಸದ್ಯದಲ್ಲೇ ಕನ್ನಡ ಆವೃತ್ತಿ ಸಹ ಹೊರ ತರಲಾಗುವುದು ಎಂದರು. ಸಿ.ಡಿ.ಸಿ. ಉಪಾಧ್ಯಕ್ಷ ಕೀರ್ತಿರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ ಪ್ರೊ. ಜನಾರ್ದನ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಚಾಂದ್ಪಾಷಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಬಸವರಾಜು, ಶಿವಣ್ಣ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

