7ನೇ ದಿನಕ್ಕೆ ಪಶು ವೈದ್ಯ ಕಾಲೇಜು ವಿದ್ಯಾರ್ಥಿಗಳ ಧರಣಿ
ಕನ್ನಡಪ್ರಭ ವಾರ್ತೆ ಹಾಸನ ಸೆ.10
ಹಾಸನ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಮಂಡಳಿ ಮಾನ್ಯತೆ ನೀಡುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಕೈಗೊಂಡಿರುವ ಅನಿರ್ದಿಷ್ಟವಾಧಿ ಪ್ರತಿಭಟನೆ ಮಂಗಳವಾರ ಏಳನೇ ದಿನಕ್ಕೆ ಕಾಲಿಟ್ಟಿದೆ. ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಮುಂದುವರೆಸಿದ್ದು, ಸೆ.11ರಿಂದ ಕಾಲೇಜಿನ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
2007ರಲ್ಲಿ ರಾಜ್ಯ ಸರ್ಕಾರದ ಅನುಮತಿಯ ಮೇರೆಗೆ ಹಾಸನ ಪಶುವೈದ್ಯಕೀಯ ಮಹಾವಿದ್ಯಾಲಯ ಆರಂಭಗೊಂಡಿದ್ದು, ಕಳೆದ 7 ವರ್ಷಗಳಲ್ಲಿ ಗಣನೀಯ ವ್ಯವಸ್ಥೆ ಹಾಗೂ ಅಭಿವೃದ್ಧಿ ಹೊಂದುವಲ್ಲಿ ಸಂಪೂರ್ಣವಿಫಲಗೊಂಡಿದೆ.
ಈ ಮಂದಗತಿಯ ಬೆಳವಣಿಗೆಯಿಂದಾಗಿ ಮಹಾವಿದ್ಯಾಲಯವು ಭಾರತ ಸರ್ಕಾರದ ಪಶು ವೈದ್ಯಕೀಯ ಮಂಡಳಿಯ ಮಾನ್ಯತೆ ಪಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಮಾನ್ಯತೆ ಇಲ್ಲದ ಕಾರಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ಬಂದಿದೆ. ಮಂಡಳಿಯ ಸತತ ಎಚ್ಚರಿಕೆಗಳ ನಂತರವು ವಿಶ್ವವಿದ್ಯಾಲಯ ಹಾಗೂ ಮಹಾವಿದ್ಯಾಲಯ ಮಂಡಳಿಯು ನಿಗದಿಪಡಿಸಿರುವ ಮಾನದಂಡಗಳನ್ನು ತಲುಪದೆ ಇದ್ದ ಕಾರಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕೆವಿಸಿ ನೊಂದಣಿ ಪಡೆಯುವದರಿಂದ ವಂಚಿತರಾಗಿದ್ದಾರೆ.
ಅಷ್ಟೇ ಅಲ್ಲದೆ ಈಗಾಗಲೇ ಈ ಕಾಲೇಜಿನಲ್ಲಿ ವ್ಯಾಸಂಗದಲ್ಲಿ ತೊಡಗಿರುವಂತಹ ವಿದ್ಯಾರ್ಥಿಗಳಿಗೆ ಮಾನ್ಯತೆ ಪಡೆದ ಪ್ರಮಾಣ ಪತ್ರ ಲಭ್ಯವಾಗದ ಕಾರಣ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪೆಟ್ಟು ಬಿದಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜಿಗೆ ಭಾರತೀಯ ಪಶುವೈದ್ಯಕೀಯ ಮಹಾವಿದ್ಯಾಲಯದ ಮಾನ್ಯತೆ ನೀಡದಿದ್ದರೆ ಸೆ.11ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಪ್ರಮೋದ್, ನಿತಿನ್, ಕೋಟ್ರೇಶ್, ಮಾರುತಿ, ರಮೇಶ್, ಚೇನತ್, ಕಿರಣ್, ಮಂಜುನಾಥ್, ಸಂತೋಷ್, ಮೋಹನ್, ಪ್ರವೀಣಕುಮಾರ್, ರೋಹಿತ್, ಭೂತೇಶ್, ನವೀನ್, ರವಿಕುಮಾರ್, ಸುರೇಶ್, ಹಿತೈಶಿಣಿ, ರಮ್ಯ, ಕಾವ್ಯ, ಪೂರ್ಣಿಮಾ, ಪಲ್ಲವಿ, ಸಂಧ್ಯಾ ಸೌಮ್ಯ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

