ಹಾಸನ

ಇಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Published On :

ಹೊಳೆನರಸೀಪುರ: ಪಟ್ಟಣದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಿಗದಿಯಂತೆ ಸೆ.12ರಂದು ಬೆಳಗ್ಗೆ ಪುರಸಭೆ ಸಭಾಂಗಣದಲ್ಲಿ ನಡೆಯಲಿದೆ. ಪ್ರಸಕ್ತ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದೆ. ಅದರಂತೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಯಾರು ಎಂಬುದು ನಿಗೂಢವಾಗಿದೆ. ಆದರೆ ಸದಸ್ಯರ ಕೆಲವರು ಮಾತ್ರ ಆ ಸ್ಥಾನಗಳ ಆಕಾಂಕ್ಷಿಗಳಾಗಿದ್ದು, ಇದೀಗ ಶಾಸಕ ರೇವಣ್ಣ ಅವರಿಗೆ ದುಂಬಾಲು ಬಿದ್ದು ತಮ್ಮನ್ನು ಆ ಸ್ಥಾನಗಳಲ್ಲಿ ಪ್ರತಿಷ್ಠಾಪಿಸುವಂತೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
ಈಗಾಗಲೇ ಅಧ್ಯಕ್ಷ ಸ್ಥಾನಕ್ಕೆ ಸದಸ್ಯೆ ಕಲಾವತಿ, ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಆರ್. ಸ್ವಾಮಿ ಅಥವಾ ರಘುರಾಮ್ ಎಂದು ಹೇಳಲಾಗುತ್ತಿದ್ದರೂ ಸಹ ಅಂತಿಮ ನಿರ್ಣಯ ಏನಿದ್ದರೂ ಶಾಸಕ ರೇವಣ್ಣ ಅವರಂತೆ ಅಂತಿಮ ಎಂದು ಹೇಳಲಾಗುತ್ತಿದೆ.
ನಾಳೆ ವಿದ್ಯುತ್ ವ್ಯತ್ಯಯ
ಹಾಸನ: ಸಾಲಗಾಮೆ ಮತ್ತು ಕಂದಲಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಸೆ.13ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ 2ನೇ ತ್ರೈಮಾಸಿಕ ನಿರ್ವಹಣಾ ಕೆಲಸಗಳನ್ನು ಮಾಡಬೇಕಾಗಿರುವುದರಿಂದ ಸಾಲಗಾಮೆ, ನಿಟ್ಟೂರು, ಎಲಗುಂದ, ಗುಳ್ಳೇನಹಳ್ಳಿ, ಮುತ್ತತಿ, ರಾಯಪುರ, ಭೋಗರಹಳ್ಳಿ, ಕಂದಲಿ, ಆಲೂರು, ಶೆಟ್ಟಿಹಳ್ಳಿ, ಕದಾಳು, ಕಣತೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ನೋಡಲ್ ಕೇಂದ್ರದ  ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.