ಹಾಸನ

ಐಕ್ಯತೆಗೆ ಭ್ರಷ್ಟಾಚಾರ ತೊಡಕು: ವೇದಮೂರ್ತಿ

Published On :

ಕನ್ನಡಪ್ರಭ ವಾರ್ತೆ, ಹಾಸನ, ಸೆ.11
ಭ್ರಷ್ಟಾಚಾರ ಸಮಾಜದಲ್ಲಿ ಒಂದು ಪಿಡುಗಾಗಿದ್ದು, ಇದು ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆ ತೊಡಕಾಗಿ ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಸೂಪರಿಟೆಂಡ್ ಆಫ್ ಪೊಲೀಸ್ ಡಾ. ಸಿ.ಬಿ. ವೇದಮೂರ್ತಿ ವಿಷಾದ ವ್ಯಕ್ತಪಡಿಸಿದರು.
ನಗರದ ಎಂ. ಕೃಷ್ಣ ಕಾನೂನು ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಮನುಷ್ಯನ ದುರಾಸೆಯೇ ಮೂಲ ಎಂದರು.
ರಾಷ್ಟ್ರೀಯ ಮಟ್ಟದಲ್ಲಿ ನಡೆದ ಒಂದು ಸರ್ವೆ ಪ್ರಕಾರ ಸರ್ಕಾರದಿಂದ ಬಿಡುಗಡೆಯಾಗುವ ಒಟ್ಟು ಹಣದಲ್ಲಿ ಶೇ.15ರಷ್ಟು ಮಾತ್ರ ನಿಗದಿಪಡಿಸಿದ ಉದ್ದೇಶಗಳಿಗೆ ಖರ್ಚಾಗುತ್ತಿದ್ದು, ಉಳಿದ ಶೇ.85ರಷ್ಟು ಹಣ ಭ್ರಷ್ಟಾಚಾರದಿಂದ ದುರುಪಯೋಗವಾಗುತ್ತಿದೆ ಎಂದರು.
ಭಾರತ ದೇಶದಲ್ಲಿ ಎಂಟು ರಾಜ್ಯಗಳಲ್ಲಿ ಲೋಕಾಯುಕ್ತ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದ್ದು, ಅವುಗಳಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಜನರಲ್ಲಿ ಅನಕ್ಷರತೆ, ಅಜ್ಞಾನ ಹೆಚ್ಚು ಇರುವುದರಿಂದ ಜನರಿಗೆ ಭ್ರಷ್ಟಾಚಾರ ನಿರ್ಮೂಲನೆಗೆ ಸಂಬಂಧಿಸಿದ ಕಾನೂನುಗಳ ತಿಳಿವಳಿಕೆ ಕಡಿಮೆ ಇದೆ ಎಂದರು. ಎಷ್ಟೋ ಜನರಿಗೆ ಲೋಕಾಯುಕ್ತದಂತಹ ಒಂದು ಸಂಸ್ಥೆಯು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ ಎಂಬ ಮಾಹಿತಿ ಕೂಡ ತಿಳಿದಿಲ್ಲ ಎಂದು ವಿಷಾದ ವ್ಯಕ್ತಡಿಸಿದರು.
ಕಾನೂನು ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಭ್ರಷ್ಟಾಚಾರ ನಿರ್ಮೂಲನೆಗೆ ಸಂಬಂಧಿಸಿದ ಕಾನೂನು ಮತ್ತು ಲೋಕಾಯುಕ್ತದ ಬಗ್ಗೆ ಅರಿವು ಮೂಡಿಸಿ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕೆಂದರು.
ರಾಜ್ಯ ವಕೀಲರ ಪರಿಷತ್ ಸದಸ್ಯ ಎಚ್.ವಿ. ತಿಮ್ಮೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಯಾವುದೇ ಪಿಡುಗನ್ನು ನಿರ್ಮೂಲನೆ ಮಾಡಲು ಕಾನೂನು ಅಥವಾ ಕಾನೂನಿನಡಿಯಲ್ಲಿ ಸ್ಥಾಪಿಸಿದ ಸಂಸ್ಥೆಯೊಂದರಿಂದಲೇ ಅಸಾಧ್ಯ. ಇದಕ್ಕೆ ಜನರ ಮಾನಸಿಕ ದೃಢತೆ ಮತ್ತು ಸಹಕಾರ ಅಗತ್ಯ ಎಂದರು.
ಎಂ. ಕೃಷ್ಣ ಕಾನೂನು ಕಾಲೇಜಿನ ಪ್ರಾಂಶುಪಾಲ ವೈ.ಪಿ. ಉದಯ ಕುಮಾರ್, ಎನ್ಎಸ್ಎಸ್ ಅಧಿಕಾರಿ ವಿ. ಶ್ರೀನಿವಾಸ ಇದ್ದರು. ಉಷಾ ನಿರೂಪಿಸಿದರು, ನಮಿತಾ ಸ್ವಾಗತಿಸಿದರು. ವೈ.ಡಿ. ರಮೇಶ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.