ಪಶು ವೈದ್ಯ ಕಾಲೇಜು: ಸಚಿವರ ಭರವಸೆ
ಕನ್ನಡಪ್ರಭ ವಾರ್ತೆ, ಹಾಸನ, ಸೆ.11
ಪಶು ವೈದ್ಯಕೀಯ ಕಾಲೇಜಿಗೆ ಮಾನ್ಯತೆ ದೊರಕಿಸಿ ಕೊಡುವ ಭರವಸೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ನೀಡಿದ್ದಾರೆ.
ಬುಧವಾರ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಕೆಲ ಸಮಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಸಂಬಂಧಪಟ್ಟ ಸಚಿವರೊಡನೆ ಮಾತುಕತೆ ನಡೆಸಿ ಸಮಸ್ಯೆಯನ್ನು ಪರಿಹರಿಸಲಾಗುವುದು. ಕೇಂದ್ರಕ್ಕೆ ವರದಿ ನೀಡಿದ ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಹೇಳುವ ಮೂಲಕ ಧರಣಿ ನಿರತರನ್ನು ಮನವೊಲಿಸಲು ಪ್ರಯತ್ನಿಸಿದರು.
ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಯಾವುದೇ ಗೊಂದಲ ಮಾಡಿಕೊಳ್ಳಬಾರದು. ನಂತರ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಕೈಬಿಟ್ಟು ಧರಣಿ ಮುಂದುವರಿಸಿದರು.
ವಿದ್ಯಾರ್ಥಿಗಳು ನಡೆಸುತ್ತಿರುವ ಧರಣಿ 8ನೇ ದಿನದಲ್ಲಿ ಮುಂದುವರಿದಿದ್ದು, ಪೋಷಕರು ಕೂಡ ಧರಣಿಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

