ದಲಿತ ಸಂಘಟನೆ ಗುಂಪುಗಳ ಮಾತಿನ ವಾಗ್ವಾದ
ಅರಸೀಕೆರೆ: ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಗುರುವಾರ ದಲಿತ ಸಂಘಟನೆಯ ಎರಡು ಗುಂಪುಗಳ ನಡುವೆ ಪರಸ್ಪರ ಮಾತಿನ ವಾಗ್ವಾದ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನವೇ ಸಕಾಲಿಕವಾಗಿ ಪೊಲೀಸರು ಮಧ್ಯೆ ಪ್ರವೇಶಿಸುವ ಮೂಲಕ ಪರಿಸ್ಥಿತಿ ತಹಬದಿಗೆ ತಂದರು.
ತಾಲೂಕಿನ ಯೋಗಾನರಸಿಂಹಸ್ವಾವು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆಯ ಆರಂಭಕ್ಕೆ ಮುನ್ನವೇ ಸಂಘದ ಕಾರ್ಯದರ್ಶಿ ಮಾಡಾಳು ಮೂಡ್ಲಪ್ಪ ಅವರು ಸಂಘದ ಅಧ್ಯಕ್ಷ ಎನ್.ಸಿ.ಚಂದ್ರಶೇಖರ್ ಸಂಘದ ಸದಸ್ಯರ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡದೆ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರ ವಿರುದ್ಧ ಮಾತಿನ ವಾಗ್ವಾದಕ್ಕೆ ಮುಂದಾದರು.
ಸಂಘದ ಕಾರ್ಯದರ್ಶಿಯಾದ ತಮ್ಮ ಹೆಸರಿನಲ್ಲಿ ನಕಲಿ ಸಹಿಗಳನ್ನು ಮಾಡುವ ಮೂಲಕ ಸಂಘದ ಬ್ಯಾಂಕ್ ಖಾತೆಯಲ್ಲಿ ಹಣವನ್ನು ಅಧ್ಯಕ್ಷರು ತೆಗೆದಿದ್ದಾರೆ. ಇದನ್ನೂ ವಿರೋಧಿಸಿದ ತಮ್ಮನ್ನೂ ಕಡೆಗಣಿಸಿ ಇಂದು ತಮ್ಮ ಗಮನಕ್ಕೆ ಬಾರದ ರೀತಿಯಲ್ಲಿ ಸಂಘದ ಸದಸ್ಯರ ಸಭೆಯನ್ನು ಅಧ್ಯಕ್ಷರು ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಈ ಸಂಬಂಧ ತಾವು ಈಗಾಗಲೇ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರನ್ನು ಸಲ್ಲಿಸಿರುವುದಾಗಿ ಅವರು ತಿಳಿಸಿದರು. ಸಂಘದ ಅಧ್ಯಕ್ಷ ಎನ್.ಸಿ.ಚಂದ್ರಶೇಖರ್, ಕಾರ್ಯದರ್ಶಿ ಮಾಡಾಳು ಮೂಡ್ಲಪ್ಪ ಇವರ ಎರಡು ಗುಂಪಿನ ನಡುವೆ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದಲ್ಲಿ ಮಧ್ಯೆ ಪ್ರವೇಶಿಸಿ ಪೊಲೀಸರು ಪರಿಸ್ಥಿತಿ ತಹಬದಿಗೆ ತಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

