ಮೋಹನ್‌ಕುಮಾರ್‌ಅರಸೀಕೆರೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷೆಯಾಗಿ ಭಾಗ್ಯಲತಾ ಅವಿರೋಧ ಆಯ್ಕೆ
ಕ.ಪ್ರ. ವಾರ್ತೆ ಅರಸೀಕೆರೆ ಸೆ. 12
ಪಟ್ಟಣದ ಪುರಸಭೆಗೆ ನೂತನ ಅಧ್ಯಕ್ಷರಾಗಿ ಮೋಹನ್‌ಕುಮಾರ್, ಉಪಾಧ್ಯಕ್ಷರಾಗಿ ಭಾಗ್ಯಲತಾ ಮಂಜುನಾಥಗುರುವಾರ ಅವಿರೋಧವಾಗಿ ಆಯ್ಕೆಗೊಳ್ಳುವ ಮೂಲಕ ಚಿಕ್ಕ ವಯಸ್ಸಿನ ಯುವಕನೊಬ್ಬ (32) ಪುರಸಭಾ ಗಾದಿಗೇರುವ ಮೂಲಕ ಮತ್ತೊಂದು ಹೊಸ ಇತಿಹಾಸಕ್ಕೆ ನಾಂದಿಯಾಡಿದ್ದಾರೆ.
ಕಾಂಗ್ರೆಸ್ ಸದಸ್ಯರ ಗೈರು, ಪಕ್ಷದ ಚಿನ್ಹೆಯಡಿ ಗೆದ್ದರೂ, ಪಕ್ಷ ಅಡಳಿತಕ್ಕೆ ಬಂದರೂ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದವರಿಗೆ ದೊರೆಯದ ಅಧಿಕಾರ. ಇವು ಇಂದಿನ ಪಟ್ಟಣದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಹೈ ಲೈಟ್ಸ್.
ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ನಿಗದಿಯಂತೆ ಗುರುವಾರ ಚುನಾವಣೆ ನಡೆಯಿತು. 27ನೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿ ನಂತರ ಜೆಡಿಎಸ್ ಸೇರ್ಪಡೆಗೊಂಡ ಮೋಹನ್‌ಮಾರ್) ಅಧ್ಯಕ್ಷರಾಗಿ, 8ನೇ ವಾರ್ಡಿನಿಂದ ಜೆಡಿಎಸ್‌ನ ಭಾಗ್ಯಲತಾ ಮಂಜುನಾಥ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಚನ್ನರಾಯಪಟ್ಟಣ ತಹಶೀಲ್ದಾರ್ ನಟರಾಜ್ ಅಧಿಕೃತವಾಗಿ ಪ್ರಕಟಿಸುವುದರೊಂದಿಗೆ ಎಲ್ಲ ಗೊಂದಲಗಳಿಗೂ ತೆರೆ ಬಿದ್ದಿತು.
ಪುರಸಭಾ ಅಧ್ಯಕ್ಷರ ಗಾದಿಗೆ ಯಾರು ಏರಬಹುದೆಂಬ ಅಧ್ಯಕ್ಷರ ರೇಸಿನಲ್ಲಿದ್ದ ನಾಲ್ವರ ಪೈಕಿ ಯಾರು ಆಯ್ಕೆಯಾಗುತ್ತಾರೆ ಎಂಬ ಬಗ್ಗೆ ತೀವ್ರ ಕುತೂಹಲ ಸಾರ್ವಜನಿಕರಲ್ಲಿ ಮೂಡಿಸಿದ್ದು ಆಯ್ಕೆ ಪ್ರಕ್ರಿಯೆಯಲ್ಲಿ 30 ತಿಂಗಳ ಅಧ್ಯಕ್ಷಗಾದಿಯನ್ನು ಶಾಸಕರ ನಿರ್ಧಾರದಂತೆ ನಾಲ್ಕು ಮಂದಿಗೆ ಸಮನಾಗಿ ಹಂಚಿಕೆ ಮಾಡುವ ಒಪ್ಪಂಧಕ್ಕೆ ಎಲ್ಲರೂ ಸಮ್ಮತಿ ಸೂಚಿಸಿದ್ದರಿಂದ ಅಧ್ಯಕ್ಷರ ಆಯ್ಕೆ ಸುಗಮವಾಯಿತು.
ಪ್ರತಿಕ್ರಿಯೆ: ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಅಧ್ಯಕ್ಷ ಮೋಹನ್ಞ್ಜ್‌ಮಾರ್, ಉಪಾಧ್ಯಕ್ಷೆ ಭಾಗ್ಯಲತಾ ಮಂಜುನಾಥ್ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕರು ಹಾಗೂ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಎಲ್ಲಾ ಪುರಸಭಾ ಸದಸ್ಯರ ಮತ್ತು ಅಧಿಕಾರಿಗಳ ನೆರವು ಪಡೆದು ಉತ್ತಮ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಭೇದ ಮರೆತು ಪ್ರಯತ್ನ ಮಾಡುತ್ತೇವೆ. ಪಟ್ಟಣದ ನಾಗರೀಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು.
ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಪಟ್ಟಣದ ಅಭಿವೃದ್ಧಿ ಸಲುವಾಗಿ ಪಕ್ಷ, ಪರಪಕ್ಷ ಎಂಬ ಭೇದವಿಲ್ಲದೆ ಒಂದಾಗಿ ಕಾರ್ಯನಿರ್ವಹಿಸುವ ಮೂಲಕ ನಾಗರೀಕರ ಆಶಯದಂತೆ ಕೆಲಸ ಮಾಡುವಂತೆ ಸಲಹೆ ನೀಡಿದರು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಘೋಷಣೆಯಾಗುತ್ತಿದ್ದಂತೆ ನೆರೆದಿದ್ದ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿ ರಾಜಬೀದಿಗಳಲ್ಲಿ ಮೆರಣಿಗೆ ನಡೆಸಿದರು.
ಜಿ.ಪಂ.ಉಪಾಧ್ಯಕ್ಷ ಬಿಳಿಚೌಡಯ್ಯ, ತಾ.ಪಂ.ಅಧ್ಯಕ್ಷ ಎಚ್.ಟಿ.ಶಿವಮೂರ್ತಿ ಎನ್.ಎಸ್.ಸಿದ್ದರಾಮಶೆಟ್ಟಿ, ಸಮೀವುಲ್ಲಾ ಮಾತನಾಡಿದರು. ಮುಖ್ಯಾಧಿಕಾರಿ ಸತ್ಯನಾರಾಯಣ ಮುಖಂಡರು ಇದ್ದರು.
ಕಾಂಗ್ರೆಸ್ ಮುಖಂಡರಿಗೆ ಮುಖಭಂಗ: ರಾಜ್ಯದಲ್ಲಿ ಆಡಳಿತ ನಡೆಸುವ ಪಕ್ಷವೇ ತಮ್ಮದಾಗಿದ್ದು ಮೀಸಲಾತಿ ನಿಗದಿ ವೇಳೆ ಪವಾಡ ಸಂಭವಿಸುತ್ತದೆ ಮೀಸಲಾತಿ ಆಧಾರದ ಮೇಲೆ ಕಾಂಗ್ರೆಸ್ ಅಧಿಕಾರ ಹಿಡಿಯುತ್ತದೆ ಎಂಬ ಆಶಾಭಾವನೆಯಲ್ಲಿದ್ದ ಕಾಂಗ್ರೆಸಿಗರಿಗೆ ಮೀಸಲಾತಿಯ ಲಾಭವೂ ಆಗದೆ ಇತ್ತ ತಡೆಯಾಜ್ಞೆ ಲಾಭವೂ ಇಲ್ಲದೆ ನಿರಾಶೆ ಭಾವನೆಯ ಸ್ಥಿತಿ ಅನುಭವಿಸುವಂತಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

