ಹಾಸನ

ಸಮಾನ ಶಿಕ್ಷಣ ನೀತಿ ಜಾಗೃತಿ ಆಂದೋಲನ

Published On :

ಕ.ಪ್ರ. ವಾರ್ತೆ೤ ಹಾಸನ೤ ಸೆ. 12
ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಏಕ ರೂಪದ ಸಮಾನ ಶಿಕ್ಷಣ ನೀತಿ ಜಾಗೃತಿ ಆಂದೋಲನವನ್ನು ಸೆ.16ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಯ ಕರ್ನಾಟಕ ಸಂಘಟನೆ ಉಪಾಧ್ಯಕ್ಷ ಸಂಗಮ್ ತಿಳಿಸಿದರು.
 ಸಮಾಜನತೆಯ ಸಮಾಜ ನಿರ್ಮಾಣಕ್ಕಾಗಿ ಜಿಲ್ಲೆಗೆ ಜನಾಂದೋಲನ ರಥಯಾತ್ರೆ ಅಗಮಸುತ್ತಿದೆ. ಬೆಳಗ್ಗೆ 11ಕ್ಕೆ ಎಂ.ಜಿ.ರಸ್ತೆಯಲ್ಲಿ ಇರುವ ಮಹಾತ್ಮಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರಥಯಾತ್ರೆ ಸಹ್ಯಾದ್ರಿ ವೃತ್ತದ ಮೂಲಕ ಹೇಮಾವತಿ ಪ್ರತಿಮೆ, ಎನ್.ಆರ್.ವೃತ್ತ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯದಲ್ಲಿ ಸಮಾನ ಶಿಕ್ಷಣ ನೀತಿ ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ನೀಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ರಥಯಾತ್ರೆಯ ಜೊತೆಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾ ತಂಡ, ಸಾಹಿತಿಗಳು, ಸಂಘದ ರಾಜ್ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದ ಅವರು, ರಥಯಾತ್ರೆಗೆ ಸಂಪೂರ್ಣ ಬೆಂಬಲವನ್ನು ಕನ್ನಡ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಪುಂಡಲೀಕ ಹಾಲಂಬಿ, ಡಾ.ಎಂ.ಚಿಂದಾನಂದ ಮೂರ್ತಿ, ಡಾ.ಕಮಲಾ ಹಂಪನಾ, ಬರಗೂರು ರಾಮಚಂದ್ರಪ್ಪ, ಪ್ರೊ.ಚಂದ್ರಶೇಖರ್ ಪಾಟೀಲ್, ಡಾ.ಜಿ.ರಾಮಕೃಷ್ಣ, ಡಾ.ಎಂ.ಎಂ.ಕಲಬುರ್ಗಿ, ಡಾ.ಬಂಜೆಗೆರೆ ಜಯಪ್ರಕಾಶ, ಬಿ.ಟಿ.ಲಲಿತಾ ನಾಯಕ್ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.