'ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಆಡಳಿತ'
ಅರಸೀಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ಮಾಜಿ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಅಹವಾಲು ಸ್ವೀಕರಿಸಲು ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 1 ರು.ಗೆ ಕೆ.ಜೆ. ಅಕ್ಕಿ ಹಾಗೂ ಇನ್ನಿತರ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಹೇಳಿದರು.
ಲೋಕಸಭಾ ಉಪಚುನಾವಣೆಯ ರಾಮನಗರ, ಮಂಡ್ಯ ಕ್ಷೇತ್ರಗಳಲ್ಲಿ ಅದ್ಭುತ ಜಯ ಸಾಧಿಸಿದಂತೆ ಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಅಚ್ಚರಿಯ ಗೆಲುವು ಸಾಧಿಸಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.
ಎರಡು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರಿಂದ ನಿರಾಯಾಸವಾಗಿ ಗೆದ್ದು ಕಾಂಗ್ರೆಸ್ ತನ್ನ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿಯೂ ಜೆಡಿಎಸ್ನ್ನು ಮಣಿಸಿ ಗೆಲುವಿನ ನಗೆ ಬೀರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಿರುವುದರಿಂದ ಪ್ರಸಕ್ತ ವಾತಾವರಣ ಕಾಂಗ್ರೆಸ್ ಪರವಾಗಿಯೇ ಇದ್ದು ಸಹಜವಾಗಿಯೇ ಇದರಿಂದಾಗಿ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರೆ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಕಾರ್ಯಕರ್ತರ ಉತ್ಸಾಹ, ಹೋರಾಟದ ಮನೋಭಾವನೆ ಕಂಡು ತಮಗೆ ಸಂತಸವಾಗಿದ್ದು, ಇದೇ ರೀತಿ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಒಕ್ಕಲಿಗರು, ವೀರಶೈವರು ಹಾಗೂ ಹಿಂದುಳಿದ ವರ್ಗಗಳ ಮತದಾರರು ಹೆಚ್ಚಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗಿಯೇ ಇದೆ. ಮಾಜಿ ಸಚಿವ ಬಿ ಶಿವರಾಂ, ರಾಜ್ಯಸಭಾ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ, ಮಾಜಿ ಶಾಸಕ ಪುಟ್ಟೇಗೌಡ, ಎಸ್.ಎಂ.ಆನಂದ್, ಒಕ್ಕಲಿಗರ ಕೋಟಾದಲ್ಲಿ ಟಿಕೆಟ್ ಪಡೆಯಲು ತೀವ್ರ ಪ್ರಯತ್ನ ನಡೆಸಿದ್ದರೆ, ಹಿಂದುಳಿದ ವರ್ಗಗಳ ಕೋಟಾದಲ್ಲಿ ಜಿಲ್ಲಾ ಕಾಂಗ್ರೆಸ್
ಹಿಂದುಳಿದ ವರ್ಗಗಳ ಅಧ್ಯಕ್ಷ ಗೊಲ್ಲರಹಳ್ಳಿ ಪಟೇಲ್ ಶಿವಪ್ಪ, ವೀರಶೈವರ ಕೋಟಾದಲ್ಲಿ ಬೇಲೂರಿನ ಬಿ.ಕೆ.ಚಂದ್ರಕಲಾ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಜೀಗೆರೆ ಚಂದ್ರಶೇಖರ್, ಯುವ ಕಾಂಗ್ರೆಸ್ ಕೋಟಾದಲ್ಲಿ ಕೆಪಿಸಿಸಿ ಜನರಲ್ ಸೆಕ್ರೆಟರಿ ಅಜ್ಜನಹಳ್ಳಿ ಬಸವರಾಜ್, ಪ್ರಯತ್ನ ಮುಂದುವರೆಸಿದ್ದು ತಮ್ಮ ಬೆಂಬಲಿಗರ ಮೂಲಕ ವರಿಷ್ಠರಿಗೆ ಮನವಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

